ಗುರುವಾರ , ಅಕ್ಟೋಬರ್ 22, 2020
22 °C
ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ನಿಯಮಗಳನ್ನು ಕೋವಿಡ್ 19 ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ತಹಶೀಲ್ದಾರ್‍ರೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಇರುವ ಬ್ಯಾನರ್‍ಗಳನ್ನು ಹಾಗೂ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಬೇಕು. ಕಚೇರಿಯ ವೆಬ್‍ಸೈಟ್‍ಗಳಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರಗಳು ಇರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಎಲ್ಲ ಮತಗಟ್ಟೆಗಳಲ್ಲಿ ಮೂಲಸೌಕರ್ಯಗಳನ್ನು ಪರಿಶೀಲಿಸಿ ಚುನಾವಣಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗಾಗಿ ನಿಗದಿತ ದಿನಾಂಕದ Àವರೆಗೆ ಸ್ವೀಕೃತಗೊಂಡ ನಮೂನೆಗಳನ್ನು ಅಕ್ಟೋಬರ್ 8 ರ ಒಳಗೆ ವಿಲೇವಾರಿ ಮಾಡಲು ಮತ್ತು ತಂತ್ರಾಂಶದಲ್ಲಿ ಅಳವಡಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಚುನಾವಣೆಗೆ ಸಂಬಂಧಿಸಿದ ದೂರುಗಳ ಬಗ್ಗೆ ನಿತ್ಯ ಚುನಾವಣಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದರು.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು, ಕರಪತ್ರ, ಜಾಹೀರಾತು, ಇನ್ನೀತರ ಪ್ರಚಾರ ಸಾಮಗ್ರಿಗಳನ್ನು ಮುದ್ರಿಸಲು ನಿಯಮಾನುಸಾರ ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ ಇದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.