ಶನಿವಾರ, ಮಾರ್ಚ್ 6, 2021
31 °C

ವಿಜಯಸಿಂಗ್ ಜನ್ಮದಿನ ಆಚರಣೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ಹಾಗೂ ಅತಿವೃಷ್ಟಿಯಿಂದ ಜನ ಸಂಕಷ್ಟದಲ್ಲಿರುವ ಕಾರಣ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಈ ಬಾರಿ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿ ಪ್ರತಿ ವರ್ಷ ಜ. 29ಕ್ಕೆ ಪ್ರೀತಿ, ಅಭಿಮಾನದಿಂದ ತಮ್ಮ ಜನ್ಮದಿನ ಕಾರ್ಯಕ್ರಮ ಸಂಘಟಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಕ್ ಕತ್ತರಿಸುತ್ತಿದ್ದೆ. ಆದರೆ, ಈ ವರ್ಷ ಕೋವಿಡ್‍ನಿಂದ ಇಡೀ ವಿಶ್ವವೇ ತೊಂದರೆಯಲ್ಲಿದೆ. ಬೀದರ್ ಸೇರಿ ಕಲ್ಯಾಣ ಕರ್ನಾಟಕ ಭಾಗದ ಜನ ಅತಿವೃಷ್ಟಿ ಹೊಡೆತಕ್ಕೆ ಒಳಗಾಗಿದ್ದಾರೆ. ಇಂಥ ಸಂದರ್ಭದಲ್ಲಿ ಸಾರ್ವಜನಿಕವಾಗಿ ಸಂಭ್ರಮ ಆಚರಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಜನ್ಮದಿನ ಆಚರಣೆ ಮಾಡಿಕೊಳ್ಳದೇ ಇರಲು ತೀರ್ಮಾನಿಸಿದ್ದೇನೆ.

ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪ್ರೀತಿ, ವಿಶ್ವಾಸಕ್ಕೆ ಚಿರಖುಣಿಯಾಗಿದ್ದೇನೆ. ಯಾರೂ ಶಾಲು, ಹಾರ, ತುರಾಯಿಗಳಿಗೆ ಹಣ ಖರ್ಚು ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು