ಶನಿವಾರ, ಸೆಪ್ಟೆಂಬರ್ 18, 2021
30 °C

ಎಟಿಎಂ ಒಡೆದು ಹಣ ಕದ್ದ ಕಳ್ಳರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೀದರ್‌: ನಗರದ ಗುಂಪಾದಲ್ಲಿ ಭಾನುವಾರ ಬೆಳಗಿನ ಜಾವ ಕಳ್ಳರು ಎಕ್ಸಿಸ್‌ ಬ್ಯಾಂಕ್‌ ಎಟಿಎಂ ಒಡೆದು ಅಂದಾಜು ಮೂರೂವರೆ ಲಕ್ಷ ರೂಪಾಯಿ ಕದ್ದೊಯ್ದಿದ್ದಾರೆ.

ಎಟಿಎಂ ಒಳಗಡೆ ಸಿಸಿಟಿವಿ ಕ್ಯಾಮೆರಾ ಇಲ್ಲ. ಹೀಗಾಗಿ ಪಕ್ಕದ ಕಟ್ಟಡದಲ್ಲಿರುವ ಸಿಸಿಕ್ಯಾಮೆರಾಗಳ ಮೂಲಕ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸಾಮಾನ್ಯವಾಗಿ ಶನಿವಾರ ಎಟಿಎಂಗಳಲ್ಲಿ ಹಣ ತುಂಬಲಾಗುತ್ತದೆ. ಆದರೆ, ಈ ವಾರ ಹಣ ಹಾಕಿರಲಿಲ್ಲ ಎನ್ನಲಾಗಿದೆ.

ಬ್ಯಾಂಕಿನ ಅಧಿಕಾರಿ ಗಾಂಧಿ ಗಂಜ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.