ಶುಕ್ರವಾರ, ಜೂನ್ 25, 2021
29 °C

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಸಹೋದರರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ (ಬೀದರ್‌ ಜಿಲ್ಲೆ): ತಾಲ್ಲೂಕಿನ ಚಳಕಾಪೂರವಾಡಿ ಗ್ರಾಮದಲ್ಲಿ ಮಂಗಳವಾರ ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ಧೂಳಪ್ಪ ಬನ್ನಾಳೆ ಅವರ ಕಿರಿಯ ಮಗ ಹಣಮಂತ ರೆಡ್ಡಿ (16) ಪಕ್ಕದ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಮುಖ ತೊಳೆದುಕೊಳ್ಳಲು ಹೋದಾಗ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. 18 ವರ್ಷದ ಎರಡನೇ ಮಗ ಕರಿಬಸವ ರೆಡ್ಡಿ ಸಹೋದರನನ್ನು ರಕ್ಷಿಸಲು ಹೋಗಿ ಅವನೂ ಹೊಂಡದಲ್ಲಿ ಬಿದ್ದಿದ್ದಾನೆ. ಇವರಿಬ್ಬರನ್ನು ರಕ್ಷಿಸಲು ಹೋದ 20 ವರ್ಷದ ಹಿರಿಯ ಸಹೋದರ ವೀರೇಂದ್ರರೆಡ್ಡಿ ನೀರಿನಲ್ಲಿ ಬಿದ್ದಿದ್ದಾನೆ. ಯಾರಿಗೂ ಈಜು ಬಾರದ ಕಾರಣ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು