ಶನಿವಾರ, ಸೆಪ್ಟೆಂಬರ್ 26, 2020
23 °C

ಬೀದರ್: 114 ಮಂದಿಗೆ ಕೋವಿಡ್ ದೃಢ, ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯಲ್ಲಿ ಮಂಗಳವಾರ 114 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ ಮೂವರಿಗೆ ಸೋಂಕು ತಗುಲಿರುವುದು ಪರೀಕ್ಷೆಯ ನಂತರ ದೃಢಪಟ್ಟಿದೆ.

ಜಿಲ್ಲೆಯ 62 ವರ್ಷದ ಮಹಿಳೆ ಉಸಿರಾಟ ತೊಂದರೆಯಿಂದಾಗಿ ಆಗಸ್ಟ್‌ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಆಗಸ್ಟ್‌ 3 ರಂದು ಕೊನೆಯುಸಿರೆಳೆದಿದ್ದರು. 85 ವರ್ಷದ ಪುರುಷ ಉಸಿರಾಟ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದಾಗಿ ಜುಲೈ 30 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಆಗಸ್ಟ್‌ 1 ರಂದು ಸಾವಿಗೀಡಾಗಿದ್ದರು.

55 ವರ್ಷದ ಮತ್ತೊಬ್ಬದ ಮಹಿಳೆ ತೀವ್ರ ಜ್ವರ ಹಾಗೂ ಉಸಿರಾಟ ತೊಂದರೆಯಿಂದ ಜುಲೈ 29 ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೆ ಆಗಸ್ಟ್ 2 ರಂದು ನಿಧನ ಹೊಂದಿದ್ದರು. ಈ ಮೂವರ ಗಂಟಲು ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಮಂಗಳವಾರ ವರದಿ ಪಾಸಿಟಿವ್ ಬಂದಿದೆ.

ಕೋವಿಡ್ ಸೋಂಕಿತರ ಸಂಖ್ಯೆ 2,562ಕ್ಕೆ ತಲುಪಿದೆ. 781 ಕೋವಿಡ್‌ ಪ್ರಕರಣಗಳು ಸಕ್ರೀಯವಾಗಿವೆ. ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಕೋವಿಡ್ ಆಸ್ಪತ್ರೆಯಿಂದ 22 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 1,692 ಮಂದಿ ಬಿಡುಗಡೆ ಹೊಂದಿದ್ದಾರೆ.

ಬೀದರ್ ತಾಲ್ಲೂಕಿನಲ್ಲಿ ಅತಿ ಹೆಚ್ಚು 39 ಜನರಿಗೆ ಸೋಂಕು ತಗುಲಿದೆ. ಹುಮನಾಬಾದ್ ತಾಲ್ಲೂಕಿನಲ್ಲಿ 23, ಔರಾದ್ ತಾಲ್ಲೂಕಿನಲ್ಲಿ 20, ಭಾಲ್ಕಿ ತಾಲ್ಲೂಕಿನಲ್ಲಿ 18 ಹಾಗೂ ಬಸವಕಲ್ಯಾಣ ತಾಲ್ಲೂಕಿನಲ್ಲಿ 14 ಕೋವಿಡ್ ಸೋಂಕು ದೃಢಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು