ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಲ್ಲಿ ಗುಡುಗು ಸಹಿತ ಮಳೆ

Published 11 ಏಪ್ರಿಲ್ 2024, 14:02 IST
Last Updated 11 ಏಪ್ರಿಲ್ 2024, 14:02 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ ಬೀದರ್‌, ಹುಮನಾಬಾದ್‌, ಹುಲಸೂರ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುರುವಾರ ಗುಡುಗು ಸಹಿತ ಜಿಟಿಜಿಟಿ ಮಳೆಯಾಗಿದೆ.

ಬುಧವಾರ ತಡರಾತ್ರಿ ಕೂಡ ಮಳೆಯಾಗಿತ್ತು. ಗುರುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ 4ಗಂಟೆ ಸುಮಾರಿಗೆ ಆರಂಭಗೊಂಡ ಜಿಟಿಜಿಟಿ ಮಳೆ ಸಂಜೆ 6.30ರ ವರೆಗೆ ಸುರಿದಿದೆ. ಮಳೆಗೆ ತಾಪಮಾನದಲ್ಲಿ ಭಾರಿ ಇಳಿಕೆಯಾಗಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಕೆಂಡದ ಬಿಸಿಲಿನಿಂದ ಬಸವಳಿದವರು ಮಳೆಯಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT