ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಪೊಲೀಸ್‌ ಬೆಂಗಾವಲಿನಲ್ಲಿ ಆಕ್ಸಿಜನ್‌ ಟ್ಯಾಂಕರ್

Last Updated 23 ಏಪ್ರಿಲ್ 2021, 4:57 IST
ಅಕ್ಷರ ಗಾತ್ರ

ಬೀದರ್‌: ‘ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆ ಇಲ್ಲ. ಆದರೆ, ಆಕ್ಸಿಜನ್ ಕೊರತೆ ಎನ್ನುವ ದೂರುಗಳು ಬರುತ್ತಿರುವ ಕಾರಣ ಬಳ್ಳಾರಿಯಿಂದ ಪೊಲೀಸ್‌ ಬೆಂಗಾವಲಿ ನಲ್ಲಿ ಆಕ್ಸಿಜನ್‌ ತರಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ. ರೆಡ್ಡಿ ತಿಳಿಸಿದ್ದಾರೆ.

‘ಬ್ರಿಮ್ಸ್‌ ಆಸ್ಪತ್ರೆಯ ಆವರಣದಲ್ಲಿ 14 ಕಿಲೋ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕ್ ಇದೆ. ತೀವ್ರ ನಿಗಾ ಘಟಕದಲ್ಲಿ 450 ರೋಗಿಗಳು ಇದ್ದಾರೆ. ಪ್ರತಿ ದಿನ 8 ಕಿಲೋ ಲೀಟರ್ ಆಕ್ಸಿಜನ್ ಬಳಕೆಯಾಗುತ್ತಿದೆ. 2 ಕಿಲೋ ಲೀಟರ್ ಆಕ್ಸಿಜನ್ ಖಾಸಗಿ ಆಸ್ಪತ್ರೆಗಳಲ್ಲಿ ಉಪಯೋಗಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

‘ಜಿಲ್ಲೆಗೆ ಒಂದು ದಿನ ಕರ್ನಾಟಕ ಗ್ಯಾಸ್ ಏಜೆನ್ಸಿ ಇನ್ನೊಂದು ದಿನ ಪ್ರ್ಯಾಕ್ಸ್ ಏರ್ ಏಜೆನ್ಸಿಯವರು ಒಪ್ಪಂದ ಪ್ರಕಾರ ಆಕ್ಸಿಜನ್ ಸರಬರಾಜು ಮಾಡುತ್ತಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT