ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಇಂದು

Last Updated 5 ಜನವರಿ 2021, 15:53 IST
ಅಕ್ಷರ ಗಾತ್ರ

ಬೀದರ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ (ಜ.6) ಚಾಲನೆ ನೀಡಲಿದ್ದಾರೆ.

ಬೀದರ್‌ನಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ, ₹5.22 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ಉದ್ಘಾಟಿಸುವರು. ₹4.90 ವೆಚ್ಚದ ಸರ್ಕಾರಿ ಶೂಶ್ರುಷ ಶಾಲೆ, ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಶಂಕುಸ್ಥಾಪನೆ ನೆರವೇರಿಸುವರು.

₹2.50 ಕೋಟಿ ವೆಚ್ಚದಲ್ಲಿ ಬೀದರ್ ತಾಲ್ಲೂಕಿನ ಮನ್ನಳ್ಳಿ, ಕಮಠಾಣಾ ಹಾಗೂ ಬೆನಕನಳ್ಳಿಯಲ್ಲಿ ಗ್ರಾಮೀಣ ಸಂತೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 140 ಕೃಷಿ ಮಾರುಕಟ್ಟೆ ಹಮಾಲರಿಗೆ ವಸತಿ ಹಕ್ಕುಪತ್ರ ವಿತರಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಪ್ರವಾಸ:
ಬುಧವಾರ ಬೆಳಿಗ್ಗೆ 10.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬೀದರ್‌ಗೆ ಬರುವರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಹೆಲಿಕಾಪ್ಟರ್‌ ಮೂಲಕ ಮಧ್ಯಾಹ್ನ 12 ಗಂಟೆಗೆ ಬಸವಕಲ್ಯಾಣಕ್ಕೆ ತೆರಳುವರು. ಅಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವರು.

ಮಧ್ಯಾಹ್ನ 2ಗಂಟೆಗೆ ಬಸವಕಲ್ಯಾಣದಿಂದ ಹೆಲಿಕಾಪ್ಟರ್‌ ಮೂಲಕ ಯಾದಗಿರಿ ಜಿಲ್ಲೆಗೆ ತೆರಳಿ ಸಂಜೆ 5 ಗಂಟೆಗೆ ಬೀದರ್‌ಗೆ ಮರಳುವರು. ನಂತರ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಪರಿಶೀಲನೆ

ಜಿಲ್ಲೆಯಲ್ಲಿ ಉದ್ಘಾಟನೆಗೊಳ್ಳಲಿರುವ ಕಟ್ಟಡಗಳನ್ನು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ರುದ್ರೇಶ ಘಾಳಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT