ಶುಕ್ರವಾರ, ಜನವರಿ 27, 2023
27 °C

ಬೀದರ್‌ನಲ್ಲಿ ನಗೆ ಹಬ್ಬ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೀದರ್‌: ದಕ್ಷಿಣ ಕರಾವಳಿ ಕನ್ನಡ ಸಂಘದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಡಿಸೆಂಬರ್ 4ರಂದು ಸಂಜೆ 5.30 ಗಂಟೆಗೆ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ಮಂಗಳೂರಿನ ವಿಠ್ಠಲ್ ನಾಯಕ ಕಲ್ಲಡ್ಕ ಮತ್ತು ತಂಡದವರಿಂದ ಗೀತಾ ಸಾಹಿತ್ಯ ಸಂಭ್ರಮ ಹಾಗೂ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

* * *
ಮಕ್ಕಳ ಶಿಷ್ಯವೇತನ ಮುಂದುವರಿಸಲು ಆಗ್ರಹ

ಬೀದರ್‌: ಹಿಂದುಳಿದ ಜಾತಿ, ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಮುಂದುವರಿಸಬೇಕು ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ದತ್ತು ಸೂರ್ಯವಂಶಿ ಒತ್ತಾಯಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಜಾರಿಗೊಳಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಆಮೂಲಗ್ರ ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದ ನರೇಂದ್ರ ಮೋದಿ ಸರ್ಕಾರ ಶಿಷ್ಯವೇತನವನ್ನೇ ಕಡಿತಗೊಳಿಸಿ ಆಘಾತ ಉಂಟು ಮಾಡಿದೆ. ಬಿಜೆಪಿ ಸರ್ಕಾರ ಎರಡು ಸಾವಿರ ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ವಿದೇಶಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಆರ್ಥಿಕ ನೆರವು ನಿಲ್ಲಿಸಲಾಗಿದೆ. ಚುನಾಯಿತ ಪ್ರತಿನಿಧಿಗಳು ಧ್ವನಿ ಎತ್ತದಿರುವುದು ಖಂಡನೀಯ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪರಿಶಿಷ್ಟ ಮತ್ತು ಪಂಗಡಗಳ ಉಪ ಯೋಜನೆಯಡಿ ಹಂಚಿಕೆಯಾದ ₹ 29,165 ಕೋಟಿ ಹಣದಲ್ಲಿ ಕೇವಲ 4,033 ಕೋಟಿ ಮಾತ್ರ ವಿನಿಯೋಗಿಸಲಾಗಿದೆ. ಯೋಜನೆಗಳನ್ನು ಪರಿಶಿಷ್ಟರಿಗೆ ತಲುಪಿಸದೇ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

* * *

ಅಲಿಯಂಬರ್‌ದಲ್ಲಿ ಜಾನಪದ ಸಂಭ್ರಮ

ಬೀದರ್‌: ಚೊಂಡಿಯ ಕರ್ಮಭೂಮಿ ಜಾನಪದ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬೀದರ್ ತಾಲ್ಲೂಕಿನ ಅಲಿಯಂಬರ್‌ದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಜಾನಪದ ಸಂಭ್ರಮ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ, ಸದಸ್ಯರಾದ ಶಿವರಾಜ, ಹುಲೆಪ್ಪ, ಸಂಜುಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ,

ಪಿ.ಕೆ.ಪಿ.ಎಸ್. ಅಧ್ಯಕ್ಷ ಸಂಗಮೇಶ ಪಾಟೀಲ, ಮುಖ್ಯ ಶಿಕ್ಷಕ ಇಸ್ಮಾಯಲ್, ಎಸ್‌ಡಿಎಂಸಿ ಅಧ್ಯಕ್ಷ ರಾಜಕುಮಾರ ಭಾವಿದೊಡ್, ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ ಪಡಸಾಲೆ ಪಾಲ್ಗೊಂಡಿದ್ದರು.

ಶಂಕರ ಚೊಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಾಗಮ್ಮ ಕಲ್ಲಪ್ಪ ಮರಖಲ್, ಡಿಲೈಮಾ, ಕವಿತಾ ಪ್ರಕಾಶ, ಶಿವಾನಂದ ನಿಂಗಪ್ಪ, ಅರ್ಜುನ ಹಾಗೂ ಸಂಗಡಿಗರು ಕಾರ್ಯಕ್ರಮ ನಡೆಸಿಕೊಟ್ಟರು. ಡಿಲೈಮಾ ಆಣದೂರ ನಿರೂಪಿಸಿದರು. ಶಿವಾನಂದ ಸಿದ್ದಾಪೂರ ಸ್ವಾಗತಿಸಿದರು. ಬಸವರಾಜ ಭಾವಿದೊಡ್ಡಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು