ತೈಲ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್‌ ಇಂದ ಪ್ರತಿಭಟನೆ

7

ತೈಲ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್‌ ಇಂದ ಪ್ರತಿಭಟನೆ

Published:
Updated:

ಬೀದರ್‌: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕರೆ ನೀಡಿರುವ ಭಾರತ ಬಂದ್ ಪ್ರಯುಕ್ತ ಸೆ.10 ರಂದು ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.

‘ವ್ಯಾಪಾರಿಗಳು ಹಾಗೂ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು. ಯಾವುದೇ ಕಾರಣಕ್ಕೂ ಒತ್ತಾಯ ಪೂರ್ವಕವಾಗಿ ಬಂದ್‌ ಮಾಡಿಸಬಾರದು ಎಂದು ಕಾರ್ಯಕರ್ತರಿಗೆ ತಿಳಿವಳಿಕೆ ನೀಡಲಾಗಿದೆ’ ಎಂದು ಹೇಳಿದ್ದಾರೆ.

‘ಪಕ್ಷದ ಜನಪ್ರತಿನಿಧಿಗಳು, ಮುಖಂಡರು, ಜಿಲ್ಲಾ ಘಟಕ, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರೋಟರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವರು. ಡಾ.ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ’ ಎಂದು ಹೇಳಿದ್ದಾರೆ.

ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ: ಜಿಲ್ಲೆಯಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಬಂದ್‌ ಪರಿಸ್ಥಿತಿಯನ್ನು ಅವಲೋಕಿಸಿ ಬಸ್‌ ಸಂಚಾರ ಆರಂಭಿಸುವ ಕುರಿತು ಸೋಮವಾರ ಬೆಳಿಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !