ಮಂಗಳವಾರ, ಆಗಸ್ಟ್ 3, 2021
28 °C

ಶಾಹೀನ್ ಕಾಲೇಜು ವಿದ್ಯಾರ್ಥಿನಿ ಜಿಲ್ಲೆಗೆ ಟಾಪರ್

ಪ‍್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಇಲ್ಲಿಯ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ರಿತಾಜ್ ಮಹಮ್ಮದ್ ಅಕ್ಬರ್ ಜಿಲ್ಲೆಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.

ರಿತಾಜ್ 600 ಅಂಕಗಳ ಪೈಕಿ 589 ಅಂಕ (ಶೇ 98.16) ಗಳಿಸಿದ್ದಾರೆ. ಭೌತ ವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನದಲ್ಲಿ ತಲಾ 100 ಅಂಕ ಪಡೆದಿದ್ದಾರೆ. ಗಣಿತ, ಹಿಂದಿಯಲ್ಲಿ ತಲಾ 98 ಹಾಗೂ ಇಂಗ್ಲಿಷ್ ವಿಷಯದಲ್ಲಿ 93 ಅಂಕ ಗಳಿಸಿದ್ದಾರೆ.

ಕಾಲೇಜಿನ ಒಟ್ಟು 1,162 ವಿದ್ಯಾರ್ಥಿಗಳಲ್ಲಿ 251 ಅಗ್ರಶ್ರೇಣಿ ಹಾಗೂ 721 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಮಹಮ್ಮದ್ ಇಬ್ರಾಹಿಂ ಅದ್ನಾನ್ ಶೇ 96, ಮಹಮ್ಮದ್ ಅರ್ಬಾಜ್ ಅಹಮ್ಮದ್ ಶೇ 95.5, ಬಸವಾಂಬಿಕಾ ಶೇ 95.5, ಪ್ರಿಯಾಂಕ ಶೇ 95.33, ಮಹಮ್ಮದ್ ರಿಜ್ವಾನ್ ಶೇ 95, ಮಹಮ್ಮದ್ ಅಲಿ ಇಕ್ಬಾಲ್ ಶೇ 95, ಕಾರ್ತಿಕ ರೆಡ್ಡಿ ಶೇ 94.83, ಮಹಮ್ಮದ್ ಅಬ್ದುಲ್ ರಸೂಲ್ ಶೇ 94.67, ಆಯಿಶಾ ಫರಿಯಾ ಅಲಾವುದ್ದಿನ್ ಶೇ 94.67, ಅಮೀನಾಬಿ ಮುಚಖೇಡ ಶೇ 94.33, ಸಬೀನ ತಬಸ್ಸುಮ ಶೇ 94, ಮಹಮ್ಮದ್ ಅಕಿಫುದ್ದಿನ್ ಶೇ 94 ಅಂಕ ಗಳಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿನಿ ಜಿಲ್ಲೆಗೆ ಮೊದಲಿಗರಾಗಿ ಹೊರ ಹೊಮ್ಮಿರುವುದು ಸಂತಸ ಉಂಟು ಮಾಡಿದೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಗುಣಮಟ್ಟದ ಶಿಕ್ಷಣದ ಕಾರಣದಿಂದಾಗಿ ಕಾಲೇಜು ಇಡೀ ರಾಜ್ಯದ ಗಮನ ಸೆಳೆದಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರತಿ ವರ್ಷವೂ ಉತ್ತಮ ಸಾಧನೆ ತೋರುತ್ತಿದೆ ಎಂದು ಅವರು ಹೇಳಿದ್ದಾರೆ.

ಆಡಳಿತ ಮಂಡಳಿ, ಉಪನ್ಯಾಸಕರ ಮಾರ್ಗದರ್ಶನ, ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಪಾಲಕರ ಸಹಕಾರದಿಂದ ಪರೀಕ್ಷೆಯಲ್ಲಿ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.