ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋಲಿ ಸಮಾಜ ಕಾಂಗ್ರೆಸ್ ಕಡೆ’

Last Updated 15 ಏಪ್ರಿಲ್ 2021, 6:49 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ಇಲ್ಲಿನ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಟೋಕರಿ ಕೋಲಿ ಹಾಗೂ ಕುರುಬ ಸಮಾಜದವರ ಮತಗಳು ಸಂಪೂರ್ಣವಾಗಿ ಕಾಂಗ್ರೆಸ್‌ಗೆ ದೊರಕಲಿವೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.

ಅವರು ಬುಧವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಈ ವಿಧಾನಸಭಾ ಕ್ಷೇತ್ರದಲ್ಲಿ 35 ಸಾವಿರ ಕೋಲಿ ಸಮುದಾಯದವರು ಮತ್ತು 22 ಸಾವಿರ ಕುರುಬ ಸಮಾಜದ ಮತಗಳಿವೆ. ಆದರೆ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹಾಗೂ ಇತರೆ ಮುಖಂಡರು ಕೋಲಿ ಸಮುದಾಯ ದವರು ಬಿಜೆಪಿಗೆ ಬೆಂಬಲಿಸುತ್ತಿ ದ್ದಾರೆ ಎಂದು ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ದಿ.ನಾರಾಯಣ ರಾವ್ ಅವರು ಕೋಲಿ ಸಮುದಾಯದ ನಾಯಕರಾಗಿದ್ದರು. ಅವರ ಪತ್ನಿ ಮಾಲಾಗೆ ಟಿಕೆಟ್ ದೊರೆತಿದ್ದರಿಂದ ಇವರನ್ನು ಬಿಟ್ಟು ಅನ್ಯರಿಗೆ ಮತ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಹೇಳಿದರು.

ಶಾಸಕ ಪ್ರಿಯಾಂಕ್ ಖರ್ಗೆ, ಕುರುಬ ಸಮಾಜದ ಮುಖಂಡ ಅಮೃತ್ ಚಿಮಕೋಡ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT