ಶುಕ್ರವಾರ, ಮಾರ್ಚ್ 5, 2021
30 °C

ರೈತರಿಂದ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ರೈತರು ಟ್ರ್ಯಾಕ್ಟರ್‌ ರ್‍ಯಾಲಿ ನಡೆಸಿದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ಹೋರಾಟ ನಡೆಸಿದ್ದಾರೆ. ಅವರಿಗೆ ಬೆಂಬಲ ಸೂಚಿಸಿ ಭಾಲ್ಕಿ ಹಾಗೂ ಬೀದರ್‌ನಲ್ಲಿ ರೈತರು ರ್‍ಯಾಲಿ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ರೈತರು ಭಾಲ್ಕಿಯಿಂದ ಟ್ರ್ಯಾಕ್ಟರ್‌ನಲ್ಲಿ ಬೀದರ್‌ಗೆ ಬರುತ್ತಿದ್ದಾಗ ಪೊಲೀಸರು ಭಾಲ್ಕಿಯ ಸುಭಾಷ ವೃತ್ತದಲ್ಲಿಯೇ ತಡೆದರು. ಕೆಲ ಟ್ರ್ಯಾಕ್ಟರ್‌ಗಳನ್ನು ಹಲಬರ್ಗಾ ಹಾಗೂ ನೌಬಾದ್‌ ಬಳಿ ತಡೆಯಲಾಯಿತು. ಹೀಗಾಗಿ ರೈತರಿಗೆ ಬೀದರ್ ವರೆಗೂ ಬರಲು ಸಾಧ್ಯವಾಗಲಿಲ್ಲ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ನಾಲ್ಕು ಟ್ರ್ಯಾಕ್ಟರ್‌ಗಳು ಅಂಬೇಡ್ಕರ್‌ ವೃತ್ತದ ವರೆಗೆ ಬಂದರೂ ಸ್ಥಳದಲ್ಲಿ ಎರಡು ಟ್ರ್ಯಾಕ್ಟರ್‌ಗಳಿಗೆ ಅವಕಾಶ ನೀಡಲಾಯಿತು. ನಂತರ ರೈತರು ಜಿಲ್ಲಾಧಿಕಾರಿ ಕಚೇರಿ ವರೆಗೆ ತೆರಳಿ ಮನವಿಪತ್ರ ಸಲ್ಲಿಸಿದರು.

ಅಂಬೇಡ್ಕರ್‌ ವೃತ್ತದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.