ಔರಾದ್: ‘ಪ್ರತಿಯೊಬ್ಬ ಪ್ರಯಾಣಿಕರು ಸಂಚಾರ ನಿಯಮ ಪಾಲಿಸಿದರೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತವೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನಸಾಬ್ ಯಾದವಾಡ ಹೇಳಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಮಂಗಳವಾರ ಪಟ್ಟಣದಲ್ಲಿ ನಡೆದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.

‘ಮಕ್ಕಳಿಗೆ ವಾಹನ ನೀಡಬಾರದು, ಕುಡಿದು ವಾಹನ ಓಡಿಸಬಾರದು, ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇದರಿಂದ ಅಪಘಾತ ತಪ್ಪುತ್ತದೆ’ ಎಂದು ಹೇಳಿದರು.

ನ್ಯಾಯಾಧೀಶ ವಿನಾಯಕ ವಾನಖಂಡೆ, ಸಿಪಿಐ ರಘುವೀರಸಿಂಗ್ ಠಾಕೂರ, ಸರ್ಕಾರಿ ವಕೀಲ ಶಿವರಾಜ ಶೆಟಕಾರ, ವಕೀಲರ ಸಂಘದ ಅಧ್ಯಕ್ಷ ಬಾಲಾಜಿ ಕಂಬಾರ, ಪಿಎಸ್ಐ ವಸೀಮ್ ಪಟೇಲ್, ವಕೀಲ ಸುಧೀರ ಮಡಿವಾಳ, ನಾಗನಾಥ ಮಸ್ಕಲೆ ಹಾಜರಿದ್ದರು. ಅಂಬಾದಾಸ ನೇಳಗೆ ನಿರೂಪಿಸಿದರು. ಪಟ್ಟಣದ ಕನ್ನಡಾಂಬೆ ವೃತ್ತದಿಂದ ಪೊಲೀಸ್ ಠಾಣೆ ವರೆಗೆ ನಡೆದ ಜಾಥಾದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.