ಬೀದರ್: ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜು ಬೀದರ್, ವಿಶ್ವೇಶ್ವರಯ್ಯ ಸಂಶೋಧನೆ ಮತ್ತು ನಾವೀನ್ಯತೆ ಪ್ರತಿಷ್ಠಾನದ ಸಹಯೋಗದೊಂದಿಗೆ ನಗರದ ಜಿಎನ್ಡಿಇ ಕಾಲೇಜಿನಲ್ಲಿ ಗುರುವಾರ ಎರಡು ದಿನಗಳ ‘ಸಂಶೋಧನ’ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಬೆಳಗಾವಿ ವಿಟಿಯು ಸಂಶೋಧನ ಕೇಂದ್ರದ ಯೋಜನಾ ವ್ಯವಸ್ಥಾಪಕ ಉರೂಜ್ ಅಕ್ತರ್ ಖಾನ್ ಇನಾಮದಾರ್ ಉದ್ಘಾಟಿಸಿ, ಇಂದಿನ ಸ್ಪರ್ಧಾತ್ಮಕ ವೃತ್ತಿಪರ ವಾತಾವರಣದಲ್ಲಿ ಯಶಸ್ವಿಯಾಗಲು ತಾಂತ್ರಿಕ ಜ್ಞಾನದ ಜೊತೆಗೆ ಕೌಶಲ ಬಹಳ ಅಗತ್ಯ. ವಿದ್ಯಾರ್ಥಿಗಳು ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ವೀಣಾ ಸೊರಗನ್ವಿ, ಉದ್ಯಮ ಮತ್ತು ಸಮಾಜದ ಬೇಡಿಕೆಗಳನ್ನು ಪೂರೈಸಲು ಎಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆ ಬಹಳ ಅಗತ್ಯ ಎಂದರು.

ಎಐಎಂಎಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಜಾಸ್ಮಿನೀತ್ ಕೌರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಜೀವನಕ್ಕೆ ಅಗತ್ಯವಾದ ಜ್ಞಾನ ಹೊಂದಬೇಕು ಎಂದು ಹೇಳಿದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲೆ ವಿನೀತಾ ಪಾಟೀಲ್, ಕರ್ನಲ್ ರವಿದೀಪ್ ಸಿಂಗ್, ಪ್ರದೀಪ್ ಕರಂಜೆ, ದೀಪಕ್ ಘೋಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.