ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರಿಗಳಿಗೆ ದೂರದೃಷ್ಟಿ ಅಗತ್ಯ

ಅಲ್ಲಮಪ್ರಭು ಪತ್ತಿನ ಸಂಘದ ಅಧ್ಯಕ್ಷ ಕುಶಾಲರಾವ್ ಹೇಳಿಕೆ
Last Updated 3 ಜನವರಿ 2019, 12:45 IST
ಅಕ್ಷರ ಗಾತ್ರ

ಬೀದರ್: ‘ಜನರಿಂದಲೇ ಸ್ಥಾಪಿತ ಪತ್ತಿನ ಸಹಕಾರಿ ಸಂಘಗಳು ತನ್ನ ಸದಸ್ಯರಿಗೆ ಸಾಲ ಸೌಲಭ್ಯ ನೀಡುವ ಸಂಸ್ಥೆಗಳಾಗಿವೆ. ದೇಶದ ಮಧ್ಯಮ ವರ್ಗದ ಕುಟುಂಬಗಳಿಗೆ ಸಾಲ ನೀಡುವ ಮತ್ತು ಉಳಿತಾಯದ ಕೇಂದ್ರಗಳಾಗಿವೆ’ ಎಂದು ಅಲ್ಲಮಪ್ರಭು ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲರಾವ್ ಪಾಟೀಲ ಹೇಳಿದರು.

ಇಲ್ಲಿನ ಪ್ರತಾಪನಗರದ ಸೌಹಾರ್ದ ತರಬೇತಿ ಸಂಸ್ಥೆಯಲ್ಲಿ ಭಟ್ಕಳದ ಜನತಾ ಸಹಕಾರಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು ಮತ್ತು ಅಧಿಕಾರಿಗಳಿಗಾಗಿ ಬುಧವಾರ ಆಯೋಜಿಸಿದ್ದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸಹಕಾರಿ ಸಂಸ್ಥೆಗಳ ಬೆಳವಣಿಗೆಗೆ ದೂರದೃಷ್ಟಿ, ನಿಸ್ವಾರ್ಥ ಸೇವೆ, ಉತ್ತಮ ನಾಯಕತ್ವ ಗುಣ ಅಗತ್ಯ. ಸಹಕಾರಿ ಕ್ಷೇತ್ರದ ಮೂಲಕ ಎಲ್ಲ ಸದಸ್ಯರಿಗೆ ಆರ್ಥಿಕ ಭದ್ರತೆ ನೀಡಿ ಆತ್ಮವಿಶ್ವಾಸ ಮೂಡಿಸುವ ಕೆಲಸವಾಗಬೇಕು. ಈ ದಿಸೆಯಲ್ಲಿ ಬೀದರ್ ಡಿಸಿಸಿ ಬ್ಯಾಂಕ್ ಜಿಲ್ಲೆಯ ಎಲ್ಲ ವರ್ಗದ ಜನರ ಆರ್ಥಿಕ ಅಗತ್ಯಗಳನ್ನು ಪೂರೈಸುವ ಸಂಸ್ಥೆಯಾಗಿ ಹೊರಹೊಮ್ಮಿದೆ’ ಎಂದು ತಿಳಿಸಿದರು.

ಕಾರವಾರ ಡಿಸಿಸಿ ಬ್ಯಾಂಕಿನ ನಿರ್ದೇಶಕ ವೈದ್ಯ ಮಂಕಾಳೆ ಮಾತನಾಡಿ, ‘ಸಹಕಾರ ಸಂಸ್ಥೆಗಳನ್ನು ಬ್ಯಾಂಕಿಂಗ್‌ ಮಾದರಿಯಲ್ಲಿ ಗಣಕೀಕರಣ ಮಾಡಲಾಗುತ್ತಿದೆ. ಪತ್ತಿನ ಸಹಕಾರ ಸಂಘಗಳು ಬದಲಾವಣೆಗೆ ಹೊಂದಿಕೊಂಡು ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ಸಂಸ್ಥೆ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಜಿ. ಪಾಟೀಲ ಸ್ವಾಗತಿಸಿದರು. ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT