ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

Last Updated 8 ಏಪ್ರಿಲ್ 2019, 16:14 IST
ಅಕ್ಷರ ಗಾತ್ರ

ಬೀದರ್: ಲೋಕಸಭಾ ಚುನಾವಣೆ ಪ್ರಯುಕ್ತ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಸೋಮವಾರ ನಗರದ ಜಿಲ್ಲಾ ರಂಗಮಂದಿರದಲ್ಲಿ ಎರಡನೇ ಹಂತದ ತರಬೇತಿ ಕಾರ್ಯಕ್ರಮ ನಡೆಯಿತು.

ವಿವಿಧ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

ಬೀದರ್ ಉಪ ವಿಭಾಗಾಧಿಕಾರಿ ಶಂಕರ ವಣಕ್ಯಾಳ ಮಾತನಾಡಿ,‘ತರಬೇತಿಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಮತದಾನದ ಎಲ್ಲ ವಿಧಿ ವಿಧಾನಗಳನ್ನು ತಿಳಿದುಕೊಳ್ಳಬೇಕು. ಇವಿಎಂ ಕಾರ್ಯವಿಧಾನಗಳ ಬಗ್ಗೆ ಸ್ಪಷ್ಟವಾಗಿ ಅರಿಯಬೇಕು. ತಮ್ಮ ತಂಡದ ಎಲ್ಲ ಸದಸ್ಯರ ಜತೆಗೂಡಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ ಮಾತನಾಡಿ, ‘ಮತಗಟ್ಟೆ ಅಧಿಕಾರಿಗಳು ತಮ್ಮ ತಮ್ಮ ಕಾರ್ಯದ ಬಗ್ಗೆ ಮೊದಲು ಅರಿತುಕೊಳ್ಳಬೇಕು. ಏನಾದರೂ ಅನುಮಾನಗಳಿದ್ದರೆ ವಿಧಾನಸಭಾ ಮಟ್ಟದ ತರಬೇತುದಾರರಿಂದ ಬಗೆಹರಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ವಿದ್ಯುನ್ಮಾನ ಮತಯಂತ್ರಗಳ ಕಾರ್ಯಗಳ ಬಗ್ಗೆ ಸಂದೇಹವಿದ್ದರೆ ಮಾಸ್ಟರಿಂಗ್ ಕೇಂದ್ರದಲ್ಲಿ ತರಬೇತಿಗಾಗಿ ಇರಿಸಿರುವ ಯಂತ್ರಗಳನ್ನು ಪ್ರಾಯೋಗಿಕವಾಗಿ ಬಳಸಿ ಮಾಹಿತಿ ಪಡೆಯಬಹುದು’ ಎಂದು ತಿಳಿಸಿದರು.

ಮತಯಂತ್ರಗಳ ಕಾರ್ಯನಿರ್ವಹಣೆ, ಅಣಕು ಮತದಾನ, ಮತಗಟ್ಟೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನಗಳು, ಅರ್ಜಿ ನಮೂನೆಗಳನ್ನು ಭರ್ತಿ ಮಾಡುವ ವಿಧಾನ, ಮತದಾನದ ಸಾಮಗ್ರಿ, ಮತದಾನ ದಿನ ಪಡೆಯಬೇಕಾದ ಸಾಮಗ್ರಿಗಳು, ಮತಗಟ್ಟೆ ತಲುಪಿದ ಮೇಲೆ ಮಾಡುವ ಕೆಲಸ, ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್, ವಿವಿಪ್ಯಾಟ್, ಮತದಾನ ಖಾತ್ರಿ ಮತ್ತು ಪ್ರದರ್ಶಕ ತೆರೆ ಯಂತ್ರಗಳನ್ನು ಜೋಡಿಸುವ ವಿಧಾನ ಕುರಿತು ಮಾಹಿತಿ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT