ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವಾಡ: ರೈತರು, ಎಸ್‍ಎಚ್‍ಜಿ ಸದಸ್ಯರಿಗೆ ತರಬೇತಿ

Last Updated 11 ಸೆಪ್ಟೆಂಬರ್ 2022, 8:17 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಕೊಳಾರ (ಬಿ) ಗ್ರಾಮದ ಬಸವ ಮಂಟಪದಲ್ಲಿ ಬೀದರ್ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯ ರೈತರು ಹಾಗೂ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಕೃಷಿ, ಹೈನುಗಾರಿಕೆ ಮೊದಲಾದ ವಿಷಯಗಳ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ನಡೆಯಿತು.


ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ವ್ಯವಸ್ಥಾಪಕ ಪಿ.ವಿ. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಿ, ಸೈನಿಕರು, ರೈತರು ಇಲ್ಲದಿದ್ದರೆ ನಾವು ಸಂತೋಷದಿಂದ ಇರಲು ಸಾಧ್ಯವಿಲ್ಲ ಎಂದರು.


ಆರ್ಥಿಕ ಅಭಿವೃದ್ಧಿಗಾಗಿ ರೈತರು ಕೃಷಿ ಜತೆಗೆ ಪಶು ಪಾಲನೆ ಮಾಡಬೇಕು ಎಂದು ತಿಳಿಸಿದರು.


ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಗಣಪತಿ ಚಂದನಕೇರಾ, ಡಿಸಿಸಿ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ ಕಲ್ಯಾಣ, ಉಮಾದೇವಿ, ಸುಮಾ, ಶಿವಶಂಕರ, ನಾಗೇಶ ಇದ್ದರು. ಜಿಲ್ಲಾ ಸಹಕಾರ ಯುನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಆರ್. ಮಲ್ಲಮ್ಮ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT