12ರಂದು ಮಾವಿನ ತೋಟದಲ್ಲೇ ತರಬೇತಿ
ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಬಳಿಯ ಕೃಷಿ ವಿಜ್ಞಾನ ಕೇಂದ್ರವು ಜ.12ರಂದು ಆಣದೂರುವಾಡಿಯ ಬಿ.ಎಸ್. ಕುದರೆ ಅವರ ಮಾವಿನ ತೋಟದಲ್ಲಿ ಕೀಟ ಹಾಗೂ ರೋಗಗಳಿಂದ ಮಾವು ನಿರ್ವಹಣೆ ಕುರಿತು ಪ್ರಾಯೋಗಿಕ ತರಬೇತಿ ಹಮ್ಮಿಕೊಂಡಿದೆ.
ಜಿಲ್ಲೆಯಲ್ಲಿ ಮಾವು ಗಿಡಗಳು ಹೂವಾಡುವ ಹಂತದಲ್ಲಿವೆ. ಪ್ರತಿ ವರ್ಷವೂ ಅನೇಕ ಕೀಟ ಹಾಗೂ ರೋಗಗಳು ಮಾವಿನ ಇಳುವರಿ ಕಡಿಮೆಯಾಗಲು ಕಾರಣವಾಗುತ್ತಿವೆ. ಹೀಗಾಗಿ ಕಡಿಮೆ ರಾಸಾಯನಿಕ ಔಷಧ, ಜೈವಿಕ ಶಿಲೀಂದ್ರ ಕೀಟನಾಶಕ ಹಾಗೂ ಜೈವಿಕ ಶಿಲೀಂದ್ರ ರೋಗ ನಾಶಕ ಬಳಸಿ ಕೀಟ ಹಾಗೂ ರೋಗಗಳನ್ನು ನಿರ್ವಹಿಸುವ ಕುರಿತು ರೈತರಿಗೆ ಮಾಹಿತಿ ಒದಗಿಸಲು ತರಬೇತಿ ಆಯೋಜಿಸಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ತಿಳಿಸಿದ್ದಾರೆ.
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಜೈವಿಕ ನಿಯಂತ್ರಣ ವಿಭಾಗದ ಮುಖ್ಯಸ್ಥ ಡಾ.ರಾಜು ತೆಗ್ಗೆಳ್ಳಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ವಿಶ್ವನಾಥ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಅನುಭವಿ ರೈತರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ರೈತರು ಹೆಚ್ಚಿನ ಮಾಹಿತಿಗೆ ಮೊ:9480103253 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.