ಸೋಮವಾರ, ನವೆಂಬರ್ 18, 2019
28 °C

ಪ್ಯಾನಲ್ ವಕೀಲರ ತರಬೇತಿಗೆ ಚಾಲನೆ

Published:
Updated:
Prajavani

ಬೀದರ್: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಪ್ಯಾನಲ್ ವಕೀಲರಿಗಾಗಿ ಆಯೋಜಿಸಿರುವ ಎರಡು ದಿನಗಳ ತರಬೇತಿ ಕಾರ್ಯಕ್ರಮ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಆರಂಭವಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಪ್ರೇಮಾವತಿ ಮನಗೂಚಾಲನೆ ಮಾತನಾಡಿ, ‘ವಿವಾಹ ಅಧಿನಿಯಮ ಕಾಯಿದೆ, ಮಹಿಳೆಯರ ಆಸ್ತಿ ಹಕ್ಕು, ಸ್ವತ್ತು, ಆಸ್ತಿ ಕಾನೂನು ಕಾಯ್ದೆಗಳ ಬಗ್ಗೆ ವಕೀಲರಿಗೆ ತರಬೇತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದರು.

‘ವಕೀಲರು ಕಾರ್ಯಕ್ರಮದ ಸದುಪಯೋಗ ಪಡೆಯಬೇಕು’ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಗದೀಶ ಜಗತಾಪ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ವಕೀಲೆ ರಮಾದೇವಿ ಪಾಲ್ಗೊಂಡಿದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಪಿ.ಸಿದ್ರಾಮ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಅಪರ್ಣಾ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ವಿ.ಎಂ.ಪ್ರಕಾಶ, ಪ್ರಧಾನ ಕಾರ್ಯದರ್ಶಿ ಧನರಾಜ ಬಿರಾದಾರ, ಜಂಟಿ ಕಾರ್ಯದರ್ಶಿ ಧನರಾಜ ಇದ್ದರು.

ಪ್ರತಿಕ್ರಿಯಿಸಿ (+)