ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಜಿ ಕಾರ್ಡ್: ಬೀದರ್ ರಾಜ್ಯದಲ್ಲೇ ಪ್ರಥಮ

ಆನ್‍ಲೈನ್‍ನಲ್ಲಿ 53 ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾರ್ಡ್ ವಿತರಣೆ
Last Updated 19 ಅಕ್ಟೋಬರ್ 2021, 5:02 IST
ಅಕ್ಷರ ಗಾತ್ರ

ಬೀದರ್: ಬೀದರ್ ಜಿಲ್ಲೆಯು ಲಿಂಗತ್ವ ಅಲ್ಪಸಂಖ್ಯಾತರಿಗೆ ಆನ್‍ಲೈನ್‍ನಲ್ಲಿ ಟಿಜಿ ಕಾರ್ಡ್ ವಿತರಿಸಿದ ರಾಜ್ಯದ ಮೊದಲ ಜಿಲ್ಲೆಯಾಗಿ ಹೊರ ಹೊಮ್ಮಿದೆ.

ಆನ್‍ಲೈನ್ ಮೂಲಕ ಟಿಜಿ ಕಾರ್ಡ್ ವಿತರಣೆ ತ್ವರಿತಗೊಳಿಸುವ ದಿಸೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದರು.

ಬೀದರ್ ಜಿಲ್ಲೆಯಲ್ಲಿ ಈವರೆಗೆ 53 ಲಿಂಗತ್ವ ಅಲ್ಪಸಂಖ್ಯಾತರಿಗೆ ಟಿಜಿ ಕಾರ್ಡ್‍ಗಳನ್ನು ವಿತರಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಕಾರ್ಡ್ ವಿತರಣೆ ಪ್ರಕ್ರಿಯೆ ತೀವ್ರಗತಿಯಲ್ಲಿ ನಡೆದಿದೆ ಎಂದರು.

944 ಲಿಂಗತ್ವ ಅಲ್ಪಸಂಖ್ಯಾತರು: ಜಿಲ್ಲೆಯಲ್ಲಿ 944 ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ 398 ಜನ ಹೆಸರು ನೋಂದಣಿ ಮಾಡಿಸಿದ್ದಾರೆ. ಇವರಲ್ಲಿ ಬೀದರ್ ತಾಲ್ಲೂಕಿನಲ್ಲಿ 140, ಭಾಲ್ಕಿ 118, ಬಸವಕಲ್ಯಾಣ 51, ಹುಮನಾಬಾದ್ 41 ಹಾಗೂ ಔರಾದ್ ತಾಲ್ಲೂಕಿನ 48 ಜನ ಸೇರಿದ್ದಾರೆ ಎಂದು
ಹೇಳಿದರು.

2014-15 ರಿಂದ 2020-21 ರವರೆಗೆ 119 ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ₹ 39,10,000 ಪ್ರೋತ್ಸಾಹ ಧನ ಹಾಗೂ ಬಡ್ಡಿ ರಹಿತ ನೇರ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಎಸ್. ರತ್ನಾಕರ್, ಕರ್ನಾಟಕ ರಾಜ್ಯ ಮಂಗಳಮುಖಿಯರ ಅಭಿವೃದ್ಧಿ ನಿಗಮದ ನಿರೀಕ್ಷಕಿ ಯಲ್ಲಮ್ಮ ಭೋವಿ, ಶರಣತತ್ವ ಪ್ರಸಾರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಬಸವರಾಜ, ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಭೀಮ್ ಅಲಿಯಾಸ್ ಭೂಮಿಕಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT