ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗಾಗಿ ತರಬೇತಿ ಕಾರ್ಯಕ್ರಮ

Last Updated 5 ಡಿಸೆಂಬರ್ 2020, 15:11 IST
ಅಕ್ಷರ ಗಾತ್ರ

ಬೀದರ್‌: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಜಿಲ್ಲೆಯ ರೈತರಿಗಾಗಿ ಡಿಸೆಂಬರ್ 9ರಿಂದ ನಗರದ ಕೇಂದ್ರ ಗ್ರಂಥಾಲಯದ ಹತ್ತಿರದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಚೇರಿ ಆವರಣದಲ್ಲಿರುವ ರೈತರ ತರಬೇತಿ ಕೇಂದ್ರದಲ್ಲಿ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಡಿ.9ರಿಂದ ಮೂರು ದಿನಗಳು ಆಧುನಿಕ ಹೈನುಗಾರಿಕೆ ತರಬೇತಿ, ಡಿ.17ರಿಂದ ಮೂರು ದಿನ ಆಧುನಿಕ ಹೈನುಗಾರಿಕೆ, ಡಿ.21ರಿಂದ ಮೂರು ದಿನ ಆಧುನಿಕ ಕುರಿ ಮತ್ತು ಆಡು ಸಾಕಾಣಿಕೆ, ಡಿ.29ರಿಂದ ಮೂರು ದಿನ ಆಧುನಿಕ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನಡೆಯಲಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಒಂದು ಭಾವಚಿತ್ರದೊಂದಿಗೆ ತರಬೇತಿಗೆ ಹಾಜರಾಗಬೇಕು. ತರಬೇತಿಯಲ್ಲಿ ಯಾವುದೇ ಭತ್ಯೆ ಹಾಗೂ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಕೋವಿಡ್-19 ಮಾರ್ಗಸೂಚಿಯನ್ವಯ ಆಸಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ಮಾಹಿತಿಗಾಗಿ ಡಾ.ಉದಯಕುಮಾರ ಪಿ:9480383732 ಇವರನ್ನು ಸಂಪರ್ಕಿಸಬಹುದು. ರೈತರು ತರಬೇತಿ ಕಾರ್ಯಕ್ರಮದ ಲಾಭ ಪಡೆಯಬೇಕು ಎಂದು ಬೀದರ್‌ ರೈತರ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT