ಮತ ಎಣಿಕೆ ಸಿಬ್ಬಂದಿಗೆ 2ನೇ ಹಂತದ ತರಬೇತಿ

ಮಂಗಳವಾರ, ಜೂನ್ 18, 2019
29 °C
ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್‌ ನಿಷೇಧ

ಮತ ಎಣಿಕೆ ಸಿಬ್ಬಂದಿಗೆ 2ನೇ ಹಂತದ ತರಬೇತಿ

Published:
Updated:
Prajavani

ಬೀದರ್‌: ಲೋಕಸಭಾ ಚುನಾವಣೆ-2019ರ ಮತ ಎಣಿಕೆ ಸಿಬ್ಬಂದಿಗೆ 2ನೇ ಹಂತದ ತರಬೇತಿ ಬುಧವಾರ ನಗರದ ಜಿಲ್ಲಾ ರಂಗಮಂದಿರದಲ್ಲಿ ನಡೆಯಿತು.

ಚುನಾವಣಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಮಾತನಾಡಿ, ‘ಮೇ 23ರ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದೆ. ಮತ ಎಣಿಕೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಬೆಳಿಗ್ಗೆ 6 ಗಂಟೆಗೆ ಬಿ.ವಿ.ಭೂಮರೆಡ್ಡಿ ಕಾಲೇಜಿನಲ್ಲಿ ಸ್ಥಾಪಿಸಿರುವ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರಬೇಕು’ ಎಂದು ತಿಳಿಸಿದರು.

‘ಮತ ಎಣಿಕೆ ಕೇಂದ್ರದಲ್ಲಿ ಗುರುತಿನ ಚೀಟಿ ಹೊಂದಿರದ ಯಾರೊಬ್ಬರಿಗೂ ಪ್ರವೇಶ ಇರುವುದಿಲ್ಲ. ಹಾಗಾಗಿ ತಮಗೆ ನೀಡಿರುವ ಗುರುತಿನ ಚೀಟಿಯೊಂದಿಗೆ ಬರಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಕೂಡದು. ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್್ ಫೋನ್‌ಗಳನ್ನ ನಿಷೇಧಿಸಲಾಗಿದೆ’ ಎಂದು ಹೇಳಿದರು.

‘ಒಟ್ಟು 14 ಟೇಬಲ್‌ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಸಿಬ್ಬಂದಿ ತಮಗೆ ವಹಿಸಿದ ಟೇಬಲ್ ಮೇಲೆ ಕುಳಿತುಕೊಳ್ಳಬೇಕು. ಪ್ರತಿ ಟೇಬಲ್‌ನಲ್ಲಿ ಒಬ್ಬರು ಮತ ಎಣಿಕೆ ಮೇಲ್ವಿಚಾಕರು, ಸಹಾಯಕರು ಹಾಗೂ ಮೈಕ್ರೊ ವೀಕ್ಷಕರು ಇರುತ್ತಾರೆ. ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅರಿತು ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಕೆಲಸ ನಿರ್ವಹಿಸಬೇಕು’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮತ ಯಂತ್ರಗಳನ್ನು ತೆರೆಯುವುದು, ಮತ ಎಣಿಕೆ, ನಿಗದಿತ ಅರ್ಜಿ ನಮೂನೆಗಳನ್ನು ಭರ್ತಿ ಮಾಡುವ ವಿಧಾನ ಹಾಗೂ ಚುನಾವಣಾ ಸಿಬ್ಬಂದಿ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ವಿವರಣೆ ನೀಡಿದರು.

ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಮಾತನಾಡಿ, ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಿದಂತೆ ಮತ ಎಣಿಕೆ ಕರ್ತವ್ಯವನ್ನು ಸಹ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ತರಬೇತಿಯಲ್ಲಿ ತಿಳಿಸಲಾದ ಸಲಹೆ-ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಕೆಲಸದ ವೇಳೆ ಯಾವುದೇ ಲೋಪಗಳಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.

ಮತ ಎಣಿಕೆ ವೀಕ್ಷಕರಾದ ಸವೀನ್ ಬನ್ಸಾಲ್, ವಂದಿತಾ ವೈದ್ಯ, ಬಿ.ರಾಮಾರಾವ್, ಹೆಚ್ಚವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಚುನಾವಣಾಧಿಕಾರಿಗಳು ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !