ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಿಂದ ದೆಹಲಿಗೆ ರೈಲು: ಖೂಬಾ

Last Updated 31 ಡಿಸೆಂಬರ್ 2019, 15:49 IST
ಅಕ್ಷರ ಗಾತ್ರ

ಬೀದರ್: ಬೀದರ್‌ನಿಂದ ದೆಹಲಿಗೆ ರೈಲು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಕಂದರಾಬಾದ್‌ನ ದಕ್ಷಿಣ ಮಧ್ಯ ರೈಲ್ವೆ ಜನರಲ್ ಮ್ಯಾನೇಜರ್ ಗಜಾನನ್ ಮಲ್ಯಾ ಭರವಸೆ ನೀಡಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರದ ರೈಲ್ವೆಗೆ ಸಂಬಂಧಿಸಿದ ಕಾಮಗಾರಿಗಳ ಕುರಿತು ಮಂಗಳವಾರ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ರೈಲುಗಳ ಸಂಚಾರ ಹಾಗೂ ಕಾಮಗಾರಿ ಆರಂಭದ ಕುರಿತು ಭರವಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬೀದರ್-ಯಶವಂತಪುರ ವಯಾ ಕಲಬುರ್ಗಿ ರೈಲು ಶೀಘ್ರ ಪ್ರಾರಂಭವಾಗಲಿದೆ. ಬೀದರ್-ಹುಬ್ಬಳ್ಳಿ ವಯಾ ಕಲಬುರ್ಗಿ ರೈಲು ಬರುವ ದಿನಗಳಲ್ಲಿ ಶುರುವಾಗಲಿದೆ ಎಂದು ತಿಳಿಸಿದ್ದಾರೆ.

ಬೀದರ್-ನಾಂದೇಡ್ ವಯಾ ಔರಾದ್ ಹೊಸ ರೈಲು ಮಾರ್ಗದ ಅಂತಿಮ ಸಮೀಕ್ಷೆ ಮುಗಿದಿದ್ದು, ಕೆಲ ದಿನಗಳಲ್ಲಿ ಕಾಮಗಾರಿಗೆ ಚಾಲನೆ ದೊರಕಲಿದೆ. ಬೀದರ್-ಕಲಬುರ್ಗಿ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಆರಂಭವಾಗಲಿದೆ. ಖಾನಾಪುರ ಪಿಟ್‌ಲೈನ್‌ ಕಾಮಗಾರಿ ಮುಗಿದಿದೆ. ಮೂರು ನಾಲ್ಕು ತಿಂಗಳಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಿದ್ದು, ನಂತರ ಪಿಟ್‌ಲೈನ್‌ ಸೇವೆ ಶುರುವಾಗಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT