ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಡಿಗೆ ಹೋಗುವ ರೈಲುಗಳು ಕಮಲನಗರದಲ್ಲಿ ನಿಲ್ಲಲಿ: ಭಗವಂತ ಖೂಬಾ

Published 4 ಜುಲೈ 2024, 14:31 IST
Last Updated 4 ಜುಲೈ 2024, 14:31 IST
ಅಕ್ಷರ ಗಾತ್ರ

ಕಮಲನಗರ: ‘ಶಿರಡಿಗೆ ಚಲಿಸುವ ರೈಲುಗಳು ಕಮಲನಗರದಲ್ಲಿ ನಿಲ್ಲುವಂತೆ ಮಾಡಲು ತಡೆಯೊಡ್ದುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿತ್ತು. ಆದ್ದರಿಂದ ಲಾಭ, ನಷ್ಟದ ಲೆಕ್ಕಾಚಾರದಲ್ಲಿ ಮತ್ತೆ ಕಮಲನಗರ ರೈಲ್ವೆ ನಿಲ್ದಾಣದಲ್ಲಿ ಈ ರೈಲುಗಳನ್ನು ನಿಲ್ಲಿಸಲು ದಕ್ಷಿಣ ಮಧ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಿಗೆ ದೂರವಾಣಿ ಮೂಲಕ ತಿಳಿಸಿದ್ದೇನೆ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಮಲನಗರದಲ್ಲಿ ಯಾವುದೇ ಕಾರಣಕ್ಕೂ ನಿಲುಗಡೆ ಬಂದ್‌ ಮಾಡಬಾರದು. ನಮ್ಮ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿ ಒತ್ತಡ ಹಾಕಿದ್ದೇನೆ. ಅದಕ್ಕನುಗುಣವಾಗಿ ರೈಲುಗಳ ನಿಲುಗಡೆಗೆ ಮತ್ತೆ ಅವಕಾಶ ದೊರೆತಿದೆ. ಇದು ನಿರಂತರವಾಗಿ ಮುಂದುವರಿಯಲಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT