‘ಸಹಾಯಕ ಎಂಜಿನಿಯರ್‌ಗಳ ವರ್ಗಾವಣೆ ಮಾಡಿ’

7

‘ಸಹಾಯಕ ಎಂಜಿನಿಯರ್‌ಗಳ ವರ್ಗಾವಣೆ ಮಾಡಿ’

Published:
Updated:
Deccan Herald

ಬೀದರ್‌: ‘2015ರಲ್ಲಿ ನೇಮಕಗೊಂಡ ಜೆಸ್ಕಾಂ ಸಹಾಯಕ ಎಂಜಿನಿಯರ್‌ಗಳಿಗೆ ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಹಾಗೂ ನೇಮಕಾತಿ ನಿಯಮದಂತೆ ವರ್ಗಾವಣೆ ಮಾಡಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಮುಲ್ತಾನಿ ಬಾಬಾ ಆಗ್ರಹಿಸಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದ್ವಿಮುಖ ನೀತಿ ಅನುಸರಿಸುತ್ತಿರುವುದು ಖಂಡನೀಯ. 2015ರಲ್ಲಿ ನೇಮಕಗೊಂಡ ಎಂಜಿನಿಯರ್‌ಗಳ ಆದೇಶ ಪತ್ರದಲ್ಲಿ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಆದರೆ, ಸರ್ಕಾರ ಆದೇಶ ಪಾಲಿಸುತ್ತಿಲ್ಲ’ ಎಂದು ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.

‘ಬೇರೆ ಇಲಾಖೆಯಲ್ಲಿ ಅವಕಾಶ ಕೊಟ್ಟಿರುವಂತೆ ಜೆಸ್ಕಾಂನಲ್ಲಿ ನೇಮಕಗೊಂಡಿರುವ ಎಂಜಿನಿಯರ್‌ಗಳನ್ನೂ ವರ್ಗಾವಣೆ ಮಾಡಬೇಕು. ತಾರತಮ್ಯ ನೀತಿಯನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು.

‘ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಇನ್ನೂ ಆದೇಶ ಹೊರಡಿಸಿಲ್ಲ. ವಿಳಂಬ ನೀತಿಯಿಂದಾಗಿ ಎಂಜಿನಿಯರ್‌ಗಳು ತೊಂದರೆ ಅನುಭವಿಸಬೇಕಾಗಿದೆ’ ಎಂದು ಹೇಳಿದರು.

‘ವಿವಾಹಿತ ಎಂಜಿನಿಯರ್‌ಗಳ ಪತಿ, ಪತ್ನಿ ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ, ಅತ್ತೆ, ಮಾವ, ತಂದೆ–ತಾಯಿ ಹಾಗೂ ಸಂಸಾರದ ನಿರ್ವಹಣೆ ಕಷ್ಟವಾಗುತ್ತಿದೆ. ಎಂಜಿನಿಯರ್‌ಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ವರ್ಗಾವಣೆಗೆ ಆದೇಶ ನೀಡಬೇಕು’ ಎಂದು ಒತ್ತಾಯಿಸಿದರು.

ರಮೇಶ ಬಿರಾದಾರ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !