ಭಾನುವಾರ, ನವೆಂಬರ್ 28, 2021
20 °C

ವಿಜಯ ದಶಮಿ ಅಂಗವಾಗಿ ಸಸ್ಯಾರೋಪಣ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘ ಹಾಗೂ ಪರಿಸರ ಜಾಗೃತಿ ಪ್ರಚಾರಾಂದೋಲನ ವೇದಿಕೆ ವತಿಯಿಂದ ನಗರದ ವಿವೇಕಾನಂದ ಕಾಲೊನಿಯಲ್ಲಿ ವಿಜಯ ದಶಮಿ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಶಿವಕುಮಾರ ಕಟ್ಟೆ, ‘ಪರಿಸರ ಸಮೃದ್ಧವಾಗಿದ್ದರೆ ಜೀವ ಸಂಕುಲ ಸ್ವಚ್ಚಂದವಾಗಿರಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಸಸಿ ನೆಟ್ಟು ಬೆಳೆಸಬೇಕು’ ಎಂದು ಹೇಳಿದರು.

ನೀಲಾಂಬಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ ಮಲಶೆಟ್ಟಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪ್ರೊ.ದೇವೇಂದ್ರ ಕಮಲ ಅಧ್ಯಕ್ಷತೆ ವಹಿಸಿದ್ದರು.

ಪ್ರೊ.ಎಸ್.ವಿ.ಕಲ್ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮವೀರ ಬಿರಾದಾರ ಸ್ವಾಗತಿಸಿದರು. ವೀರಭದ್ರಪ್ಪ ಉಪ್ಪಿನ ನಿರೂಪಿಸಿದರು ಸಂಜೀವಕುಮಾರ ಸ್ವಾಮಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು