ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪ್ರಕರಣ ಶೂನ್ಯಕ್ಕೆ ಇಳಿಸಲು ಯತ್ನ

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿಕೆ
Last Updated 1 ಜೂನ್ 2021, 13:58 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿವೆ. ಸೋಂಕಿತರ ಸಂಖ್ಯೆಯನ್ನು ಶೂನ್ಯಕ್ಕೆ ಇಳಿಸುವ ದಿಸೆಯಲ್ಲಿ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ತೀವ್ರಗತಿಯಲ್ಲಿ ನಡೆಯುತ್ತಿದೆ. ಆರೋಗ್ಯ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ತಿಳಿಸಿದರು.

‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಮುಂದುವರಿದಿದೆ. ಬಸವಕಲ್ಯಾಣ ತಾಲ್ಲೂಕಿನಲ್ಲಿ ಈಗಾಗಲೇ 190 ಹಳ್ಳಿಗಳಲ್ಲಿ ಕಾರ್ಯಕ್ರಮ ನಡೆದಿದೆ. ಜಿಲ್ಲೆಯಲ್ಲಿ 600 ಹಳ್ಳಿಗಳು ಇವೆ’ ಎಂದು ಹೇಳಿದರು.

‘ರೆಮ್‌ಡಿಸಿವಿರ್ ಚುಚ್ಚುಮದ್ದು ಅಗತ್ಯ ಪ್ರಮಾಣದಲ್ಲಿ ಲಭ್ಯವಿದೆ. ಆಮ್ಲಜನಕ ಮತ್ತು ಬೆಡ್ ಕೊರತೆ ಇಲ್ಲ. 19 ಜನರಿಗೆ ಬ್ಲಾಕ್ ಫಂಗಸ್ ಸೋಂಕು ಇರುವ ಬಗ್ಗೆ ವರದಿಯಾಗಿದೆ. ಇವರಿಗೆ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಸನ್ಮಾನ ಮಾಡಿ ಪ್ರೋತ್ಸಾಹಿಸಲಾಗಿದೆ’ ಎಂದು ಹೇಳಿದರು.

ರಹೀಂ ಖಾನ್, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT