ಬೀದರ್: ಚಿಕಿತ್ಸೆ ಪಡೆಯದ ಕ್ಷಯ ಸೋಂಕಿತ ವ್ಯಕ್ತಿಯಿಂದ ಒಂದು ವರ್ಷದಲ್ಲಿ 10 ರಿಂದ 15 ಜನರಿಗೆ ಕ್ಷಯ ರೋಗ ಹರಡುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಶರಣಯ್ಯ ಸ್ವಾಮಿ ಹೇಳಿದರು.
ನಗರದ ಭಾರತೀಯ ಕುಟುಂಬ ಯೋಜನಾ ಸಂಘದ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ರೋಗ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಯ ರೋಗದ ಕ್ರಿಮಿಗಳು ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಗಳಿಗೆ ಸೋಂಕು ಉಂಟು ಮಾಡುತ್ತವೆ. ಕ್ಷಯ ರೋಗಕ್ಕೆ ಚಿಕಿತ್ಸೆ ಇದೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದರು.
ಎಫ್‍ಪಿಎಐ ಬೀದರ್ ಶಾಖೆ ಅಧ್ಯಕ್ಷ ಡಾ. ನಾಗೇಶ ಪಾಟೀಲ, ಗೌರವ ಕಾರ್ಯದರ್ಶಿ ರೇಖಾ ಚಂದಾ, ಗೌರವ ಖಜಾಂಚಿ ಡಾ. ವಿಜಯ ಕೊಂಡಾ ಮಾತನಾಡಿದರು.
ಅಂಕಿ ಸಂಖ್ಯಾಧಿಕಾರಿ ವಿನಾಯಕ ಕುಲಕರ್ಣಿ, ಕಾರ್ಯಕ್ರಮ ಅಧಿಕಾರಿ ವಿಜಯಲಕ್ಷ್ಮಿ ಹುಡಗೆ ಇದ್ದ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.