ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ಗೆ ಎರಡು ಆಂಬುಲನ್ಸ್ ದೇಣಿಗೆ

Last Updated 3 ಆಗಸ್ಟ್ 2021, 14:52 IST
ಅಕ್ಷರ ಗಾತ್ರ

ಬೀದರ್: ಕೋವಿಡ್ ವೇಳೆ ಜನರ ನೆರವಿಗಾಗಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು ಆಮ್ಲಜನಕ ವ್ಯವಸ್ಥೆ ಹೊಂದಿರುವ ಎರಡು ಆಂಬುಲನ್ಸ್‌ಗಳನ್ನು ಬೀದರ್‍ಗೆ ದೇಣಿಗೆ ರೂಪದಲ್ಲಿ ಕೊಟ್ಟಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 12 ಆಂಬುಲನ್ಸ್‍ಗಳನ್ನು ದೇಣಿಗೆಯಾಗಿ ಕೊಡಲಾಗಿದೆ. ಅದರಲ್ಲಿ ಬೀದರ್‌ಗೆ ಎರಡು ಆಂಬುಲನ್ಸ್‌ಗಳನ್ನು ಒದಗಿಸಲಾಗಿದೆ ಎಂದು ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದ್ದಾರೆ.

ಆಂಬುಲನ್ಸ್‌ಗಳ ಸಂಪೂರ್ಣ ಉಚಿತ ಸೇವೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಒಂದು ಆಂಬುಲನ್ಸ್ ಮನ್ನಾಎಖ್ಖೆಳ್ಳಿ ಹಾಗೂ ಇನ್ನೊಂದು ಕಮಠಾಣದಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ಕೋವಿಡ್ ಸೋಂಕಿತರು, ಅಪಘಾತಗಳಲ್ಲಿ ಗಾಯಗೊಂಡವರು, ಗರ್ಭಿಣಿಯರಿಗೆ ಹೆರಿಗೆಗಾಗಿ ಆಸ್ಪತ್ರೆಗೆ ಸಾಗಿಸಲು ಆಂಬುಲನ್ಸ್ ಸೇವೆ ಪಡೆಯಬಹುದು ಎಂದು ತಿಳಿಸಿದ್ದಾರೆ.

ಮನ್ನಾಎಖ್ಖೆಳ್ಳಿ ಹಾಗೂ ಕಮಠಾಣ ಸುತ್ತಮುತ್ತಲಿನ ಗ್ರಾಮಗಳ ಜನರು ಆಂಬುಲನ್ಸ್ ಸೇವೆಗಾಗಿ ಮೊಬೈಲ್ ಸಂಖ್ಯೆ 9483506666 (ಮನ್ನಾಎಖ್ಖೆಳ್ಳಿ), 9483406666 (ಕಮಠಾಣ)ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಬೀದರ್ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಮೂರನೇ ಅಲೆ ಬಗ್ಗೆ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಮಕ್ಕಳನ್ನು ಹೆಚ್ಚು ಕಾಡಬಹುದು ಎನ್ನುವ ಮಾಹಿತಿಯನ್ನೂ ಕೊಟ್ಟಿದ್ದಾರೆ. ಹೀಗಾಗಿ ಮೂರನೇ ಅಲೆ ಎದುರಾದಲ್ಲಿ ಸೋಂಕಿತರಿಗೆ ಆಸ್ಪತ್ರೆಗೆ ಸಾಗಿಸಲು ಹಾಗೂ ಇತರ ರೋಗಿಗಳ ತುರ್ತು ವೈದ್ಯಕೀಯ ಸೇವೆಗೆ ನೆರವಾಗಲು ಆಂಬುಲನ್ಸ್‌ ಗಳನ್ನು ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕೋವಿಡ್ ಸೋಂಕಿತರಿಗೆ ಆಮ್ಲಜನಕ ಕೊರತೆಯಾಗುವುದನ್ನು ತಪ್ಪಿಸಲು ಬ್ರಿಮ್ಸ್ ಆವರಣದಲ್ಲಿ ಸ್ಥಾಪಿಸುತ್ತಿರುವ ಆಮ್ಲಜನಕ ಘಟಕಕ್ಕೆ ನಿಗಮದಿಂದ ರೂ. 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT