ಮಂಗಳವಾರ, ಜೂನ್ 15, 2021
20 °C

ಶಾಸಕರಿಂದ ಎರಡು ಆಂಬುಲೆನ್ಸ್‌ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ತಾಲ್ಲೂಕಿನ ಕೊರೊನಾ ಸೋಂಕಿತರ ಸಹಾಯಕ್ಕಾಗಿ ಶಾಸಕ ಈಶ್ವರ ಖಂಡ್ರೆ ಅವರು ಎರಡು ಆಂಬುಲೆನ್ಸ್‌ಗಳನ್ನು ಉಚಿತ ಸೇವೆಗಾಗಿ ಸರ್ಕಾರಿ ಆಸ್ಪತ್ರೆಗೆ ನೀಡಿದ್ದಾರೆ.

ಕಾಂಗ್ರೆಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ ಮಾತನಾಡಿ, ‘ಕೋವಿಡ್‌ 2ನೇ ಅಲೆ ಪ್ರಾರಂಭ ಆದಾಗಿನಿಂದ ಶಾಸಕ ಖಂಡ್ರೆ ಕೋವಿಡ್‌ ರೋಗಿಗಳ ಉತ್ತಮ ಉಪಚಾರಕ್ಕಾಗಿ ಅವಿರತ ಶ್ರಮಿಸುತ್ತಿದ್ದಾರೆ. ಹಗಲು, ರಾತ್ರಿ ಸಚಿವರು, ಉನ್ನತ ಅಧಿಕಾರಿಗಳು, ಜಿಲ್ಲೆಯ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ವೈದ್ಯರ ಜೊತೆ ಸಂಪರ್ಕದಲ್ಲಿದ್ದು, ಸೋಂಕಿತರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಈಗ ತಾಲ್ಲೂಕು ಆಸ್ಪತ್ರೆಗೆ ಎರಡು ಸುಸಜ್ಜಿತ ಆಂಬುಲೆನ್ಸ್ ಉಚಿತವಾಗಿ ಸಲ್ಲಿಸಿದ್ದಾರೆ’ ಎಂದರು.

‘ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದಾಗ ಜಿಲ್ಲಾಧಿಕಾರಿ, ಸಚಿವರ ಜೊತೆ ಚರ್ಚಿಸಿ ಭಾಲ್ಕಿಗೆ ಆಕ್ಸಿಜನ್ ಘಟಕ ಮಂಜೂರಿ ಮಾಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ಕೋವಿಡ್‌ ರೋಗಿಗಳಿಗೆ ಸರ್ಕಾರದಿಂದ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಒತ್ತಾಯಿಸುತ್ತಿದ್ದಾರೆ’ ಎಂದು ತಿಳಿಸಿದರು.

ಆಂಬುಲೆನ್ಸ್ ಸೇವೆ ಬೇಕಾದಲ್ಲಿ ಮೊಬೈಲ್‌ ಸಂಖ್ಯೆ 9986939394, 7204661748 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ದತ್ತಾತ್ರೇಯ ಮೂಲಗೆ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.