ಔರಾದ್/ ಬೀದರ್: ತೆಲಂಗಾಣ ರಾಜ್ಯದ ಜಹಿರಾಬಾದ್ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಔರಾದ್ ತಾಲ್ಲೂಕಿನ ನಾಗಮಾರಪಳ್ಳಿಯ ಅವಿರಾಜ ಚಂದ್ರಕಾಂತ ಘೋಡೆ (26) ಹಾಗೂ ಬೀದರ್‌ನ ಗುಂಪಾ ನಿವಾಸಿ ವೀರೇಶ (32) ಮೃತರು.
ಈ ಇಬ್ಬರು ಗೆಳೆಯರು ಬೆಳಿಗ್ಗೆ ಹೈದರಾಬಾದ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಹಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.