ಶನಿವಾರ, ಜೂನ್ 19, 2021
27 °C

ಒಳ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಮೃತ ಯೋಜನೆಯ ನಗರದ ವಲಯ 2 ಮತ್ತು 3ರ ಒಳಚರಂಡಿ ಕಾಮಗಾರಿಯಲ್ಲಿ ಬಾಕಿ ಉಳಿದ 30 ಕಿಮೀ ಉದ್ದದ ಒಳ ಚರಂಡಿ ಕಾಮಗಾರಿಗೆ ಇಲ್ಲಿಯ ರೋಟರಿ ವೃತ್ತದದಲ್ಲಿ ಸಂಸದ ಭಗವಂತ ಖೂಬಾ ಭಾನುವಾರ ಚಾಲನೆ ನೀಡಿದರು.

ನಂತರ ಮಾತನಾಡಿ, ‘ಅಮೃತ ಯೋಜನೆಗೆ ಬೀದರ್‌ ನಗರ ಮೊದಲ ಹಂತದಲ್ಲೇ ಆಯ್ಕೆಯಾಗಿದೆ. ಈಗಾಗಲೇ ₹ 200 ಕೋಟಿ ವೆಚ್ಚದ ಕಾಮಗಾರಿ ಮುಕ್ತಾಯದ ಹಂತದಲ್ಲಿ ಇದೆ. ಇದೀಗ ಬಾಕಿ ಉಳಿದಿರುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

ಬೀದರ್‌ ಶಾಸಕ ರಹೀಂ ಖಾನ್, ವಿಧಾನ ಪರಿಷತ್‌ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ಅರವಿಂದಕುಮಾರ ಅರಳಿ, ಬಿಜೆಪಿ ಮುಖಂಡ ಬಾಬು ವಾಲಿ, ನಗರಸಭೆ ಆಯುಕ್ತ ಬಸಪ್ಪ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್‌ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.