ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕೇಂದ್ರ ಸಚಿವ ಭಗವಂತ ಖೂಬಾ ಇಂದು ನಗರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಆಗಸ್ಟ್ 16ರಂದು ಬೀದರ್‌ ಜಿಲ್ಲೆಗೆ ಬರಲಿದ್ದಾರೆ.

ಸೋಮವಾರ ಬೆಳಿಗ್ಗೆ 9.45ಕ್ಕೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರಿಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ ರಾಜ್ಯದ ಗಡಿಗೆ ಬರುವರು. ಅಲ್ಲಿಂದ ಶಾಹಪುರ ಗೇಟ್, ರಿಂಗ್ ರಸ್ತೆ ಮೂಲಕ ಸಿದ್ದಾರೂಢ ಮಠಕ್ಕೆ ಬಂದು ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ. ನಂತರ ನಗರದ ಪ್ರಮುಖ ವೃತ್ತಗಳಲ್ಲಿರುವ ಮಹಾಪುರಷ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

ಬಸವೇಶ್ವರ ವೃತ್ತದಿಂದ ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಹೊರಟು ಭಗತ್‍ಸಿಂಗ್ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯಾ ವೃತ್ತ , ರೋಟರಿ ವೃತ್ತ, ಮಡಿವಾಳ ವೃತ್ತ ಹಾಗೂ ಬಿಜೆಪಿ ಜಿಲ್ಲಾ ಘಟಕದ ಕಚೇರಿ ಮಾರ್ಗವಾಗಿ ಮಧ್ಯಾಹ್ನ 1.30ಕ್ಕೆ ಘಾಳೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಜನಶೀರ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ರಾಮಕೃಷ್ಣ ಆಶ್ರಮದ ಆವರಣದಲ್ಲಿ ಸಸಿ ನೆಡುವರು. ನಂತರ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಭೇಟಿ ಕೊಡುವರು. ಬ್ರಿಮ್ಸ್‌ನಲ್ಲಿ ಕೋವಿಡ್‌ ವಾರಿಯರ್‌ಗಳನ್ನು ಸನ್ಮಾನಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.