ಬೀದರ್: ದೇಶದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ಏಕತಾ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ಬಸವೇಶ್ವರ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಏಕತಾ ನಡಿಗೆಗೆ ಹಸಿರು ನಿಶಾನೆ ತೋರಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಶಿವನಗೌಡ ಪಾಟೀಲ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ಬಸವೇಶ್ವರ ವೃತ್ತದಿಂದ ಆರಂಭಗೊಂಡ ಏಕತಾ ನಡಿಗೆ, ಮಹಾವೀರ ವೃತ್ತದ ಮೂಲಕ ಹಾದು ಬರೀದ್ ಷಾಹಿ ಉದ್ಯಾನದ ವರೆಗೆ ನಡೆಯಿತು. ಶ್ವೇತ ವರ್ಣದ ಟೀ ಶರ್ಟ್ ಧರಿಸಿ ಹೆಜ್ಜೆ ಹಾಕಿದರು. ನಡಿಗೆಯಲ್ಲಿ ಪಾಲ್ಗೊಂಡವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

Cut-off box - ಕಾಂಗ್ರೆಸ್ ಕಚೇರಿಯಲ್ಲಿ ಪಟೇಲರಿಗೆ ಗೌರವ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ದೇಶದ ಮೊದಲ ಗೃಹಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಹಾಗೂ ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಇಬ್ಬರು ಮಹನೀಯರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿದರು. ಇಂದಿರಾ ಗಾಂಧಿ ಅವರು ‘ಗರೀಬಿ ಹಠಾವೋ ಘೋಷಣೆಯ ಮೂಲಕ ದೇಶದ ಬಡವರ ಜೀವನೋನ್ನತಿಗಾಗಿ ಜೀವಪರ್ಯಂತ ಹೋರಾಡಿದರು. ಬ್ಯಾಂಕುಗಳ ರಾಷ್ಟ್ರೀಕರಣದ ಮೂಲಕ ಶ್ರೀಸಾಮಾನ್ಯರಿಗೂ ಬ್ಯಾಂಕಿಂಗ್ ವ್ಯವಸ್ಥೆಯ ಲಾಭ ತಲುಪುವಂತೆ ಮಾಡಿದವರು. ಹಸಿರು ಕ್ರಾಂತಿಯ ಮೂಲಕ ಭಾರತವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ರಾಷ್ಟ್ರವನ್ನಾಗಿ ರೂಪಿಸಿದರು ಎಂದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ಉಕ್ಕಿನ ಮನುಷ್ಯರು. ಅವರು ದೇಶದ 562 ಸಂಸ್ಥಾನಗಳನ್ನು ಒಂದೇ ಭಾರತದ ಅಖಂಡ ರೂಪದಲ್ಲಿ ಏಕೀಕರಿಸಿದ ನಾಯಕರು. ಹೈದರಾಬಾದ್ ಕರ್ನಾಟಕ ನಿಜಾಮನ ಆಡಳಿತದಿಂದ ಮುಕ್ತವಾಗಲು ಅವರ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಸ್ಮರಿಸಿದರು. ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.

Cut-off box - ಸಾಮೂಹಿಕ ಶಪಥ ಸರ್ದಾರ್ ವಲ್ಲಭ ಭಾಯಿ ಪಟೇಲ್ ಪ್ರತಿಷ್ಠಾನ ಜಿಲ್ಲಾಡಳಿತ ಸಾರ್ವಜನಿಕ ಶಿಕ್ಷಣ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ವೋದಯ ನ್ಯಾಸ ಭಾರತ ಸೇವಾದಳ ಬೀದರ್ ಮಹಾನಗರ ಪಾಲಿಕೆ ಮತ್ತು ಭಾರತ ಸಂರಕ್ಷಣಾ ಸಮಿತಿ ಬೀದರ್ ಸಹಯೋಗದಲ್ಲಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಸರ್ದಾರ್ ವಲ್ಲಭ ಭಾಯಿ ಪಟೇಲರ 151ನೇ ಜಯಂತಿ ಅಂಗವಾಗಿ 12ನೇ ರಾಷ್ಟ್ರೀಯ ಏಕತಾ ದಿವಸದ ಸಾಮೂಹಿಕ ಶಪಥ ಗ್ರಹಣ ಕಾರ್ಯಕ್ರಮ ನಡೆಯಿತು. ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಪ್ಪ ವಾಲಿ ಪ್ರಮುಖರಾದ ರಘುನಾಥ ರಾವ್ ಮಲ್ಕಾಪುರೆ ಸೂರ್ಯಕಾಂತ ನಾಗಮಾರಪಳ್ಳಿ ಶರಣಪ್ಪ ಸಿಕೇನಪುರ ಈಶ್ವರ ಸಿಂಗ್ ಠಾಕೂರ್ ವಾಣಿಜ್ಯ ಮಂಡಳಿ ಅಧ್ಯಕ್ಷ ಬಿ.ಜಿ.ಶೆಟಕಾರ್ ರೇವಣಸಿದ್ದಪ್ಪ ಜಲಾದೆ ಬಸವರಾಜ ಧನ್ನೂರ ಹಾವಶೆಟ್ಟಿ ಪಾಟೀಲ್ ಸೋಮಶೇಖರ್ ಪಾಟೀಲ್ ಗಾದಗಿ ಡಾ. ರಜನೀಶ್ ವಾಲಿ ದೀಪಕ್ ವಾಲಿ ಇದ್ದರು. ಇದಕ್ಕೂ ಮುನ್ನ ಮೆರವಣಿಗೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.