ಖಟಕ ಚಿಂಚೋಳಿ: ‘ನೂತನವಾಗಿ ಆರಂಭವಾ ಗಿರುವ ಬೀದರ್ ವಿಶ್ವವಿದ್ಯಾ ಲಯವನ್ನು ಮಾದರಿಯಾಗಿ ರೂಪಿಸಲು ಶೈಕ್ಷಣಿಕ ಕ್ಷೇತ್ರದ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಬೀದರ್ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಹೇಳಿದರು.
ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಬೀದರ್ ವಿಶ್ವವಿದ್ಯಾಲಯದ ಕಚೇರಿಯಲ್ಲಿ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದಿಂದ (ಕೆಜಿಸಿಟಿಎ) ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
25 ಬಿ.ಇಡಿ ಸೇರಿದಂತೆ ಸುಮಾರು 120 ಕಾಲೇಜುಗಳು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡಲಿವೆ. ಆಧುನಿಕ ತಂತ್ರಜ್ಞಾನ ಆಧಾರಿತ ಮತ್ತು ಕೌಶಲ ಪರಿಣಿತ ವಿದ್ಯಾರ್ಥಿಗಳನ್ನು ಹೊರತರುವ ಕಾರ್ಯ ವಿಶ್ವವಿದ್ಯಾಲಯದಿಂದ ಆಗಲಿದೆ ಎಂದು ಅವರು ತಿಳಿಸಿದರು.
ಕೆಜಿಸಿಟಿಎ ಗುಲಬರ್ಗಾ ವಿಶ್ವವಿ ದ್ಯಾಲಯದ ವಲಯ ಕಾರ್ಯದರ್ಶಿ ಡಾ. ವೀರಶೆಟ್ಟಿ ಮೈಲೂರಕರ್ ಅವರು, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಂಘ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.
ಚಿಟಗುಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಸುರೇಂದರ್ ಸಿಂಗ್, ಸಹ ಪ್ರಾಧ್ಯಾಪಕರಾದ ದಶರಥ ನಯನೂರ, ಡಾ. ಶಿವಕುಮಾರ ಬಿರಾದಾರ, ರವೀಂದ್ರ ಟಿಳೆಕರ್, ಪ್ರೊ, ಗಬಾಡೆ, ಡಾ. ಶಿವನಂದ ರುಮ್ಮಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.