ಭಾನುವಾರ, ಜೂನ್ 13, 2021
21 °C
ಡಿ.ಕೆ.ಸಿದ್ರಾಮ ಅವರಿಂದ 1 ಲಕ್ಷ ಮಾಸ್ಕ್‌, ಸ್ಯಾನಿಟೈಸರ್‌ ವಿತರಣೆ

‘ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ಮಾಸ್ಕ್‌ ಬಳಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಎಲ್ಲರೂ ಕಡ್ಡಾಯವಾಗಿ ನಿತ್ಯ ಮಾಸ್ಕ್‌, ಸ್ಯಾನಿಟೈಸರ್‌ ಬಳಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅವರ ವತಿಯಿಂದ ಒಂದು ಲಕ್ಷ ಮಾಸ್ಕ್‌, ಸ್ಯಾನಿಟೈಸರ್‌ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಡಿ.ಕೆ.ಸಿದ್ರಾಮ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಮಾತನಾಡಿ, ಕೋವಿಡ್‌ನಿಂದ ಸಂಕಷ್ಟದಲ್ಲಿರುವ ರೋಗಿಗಳು, ಸಂಬಂಧಿಕರು, ಬಡವರಿಗೆ ಆಹಾರದ ಕಿಟ್‌ ಕೊಡಲಾಗುತ್ತಿದೆ. ಜನರಿಗೆ ಮಾಸ್ಕ್‌, ಸ್ಯಾನಿಟೈಸರ್‌ನ ಮಹತ್ವ ತಿಳಿಸುವುದರ ಜೊತೆಗೆ ಜಾಗೃತಿ ಮೂಡಿಸಬೇಕು ಎಂಬ ಉದ್ದೇಶದಿಂದ ತಾಲ್ಲೂಕಿನ ಎಲ್ಲ ಹಳ್ಳಿಗಳಲ್ಲಿ ಒಂದು ಲಕ್ಷ ಮಾಸ್ಕ್‌, ಸ್ಯಾನಿಟೈಸರ್‌ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಲಾಕ್‍ಡೌನ್ ಪರಿಶೀಲನೆ: ಪಟ್ಟಣದಲ್ಲಿ ಲಾಕ್‌ಡೌನ್‌ ಜಾರಿ ಕ್ರಮದ ಬಗ್ಗೆ ಸಚಿವ ಪ್ರಭು ಚವಾಣ್‌ ಪರಿಶೀಲಿಸಿದರು.

ತಾಲ್ಲೂಕಿನಲ್ಲಿ ಕೋವಿಡ್ ಎರಡನೇ ಅಲೆ ತಡೆಗೆ ತಾಲ್ಲೂಕು ಆಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ತಹಶೀಲ್ದಾರ್‌ ಅಣ್ಣರಾವ್ ಪಾಟೀಲ, ಇತರ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಆಸ್ಪತ್ರೆಯ ಹಾಜರಾತಿ ಪುಸ್ತಕ ಪರಿಶೀಲಿಸಿ, ಎಲ್ಲ ವೈದ್ಯಾಧಿಕಾರಿ, ಆಸ್ಪತ್ರೆಯ ಸಿಬ್ಬಂದಿ ಸರಿಯಾಗಿ ಕಾರ್ಯನಿರ್ವಹಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಸೋಂಕಿತರೊಂದಿಗೆ ಆತ್ಮೀಯವಾಗಿ ವರ್ತಿಸಿ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ತಿಳಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್‌, ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್, ಡಿಎಚ್‌ಒ ಡಾ.ವಿ.ಜಿ.ರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಂಡಿತ ಶಿರೋಳೆ, ಸಂಗಮೇಶ ಭೂರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಶಿವಲಿಂಗ ಕುಂಬಾರ, ಶಿವರಾಜ ಗಂದಗೆ, ರೇಕು ನಾಯಕ, ರೇವಣಸಿದ್ದ ಜಾಡರ್, ಈಶ್ವರ ರುಮ್ಮಾ, ಸಂತೋಷ ಪಾಟೀಲ, ಸಂಗಮೇಶ ಟೆಂಕಾಳೆ, ಸುರೇಶ ಹುಬ್ಬಳ್ಳಿಕರ್‌, ಶಿವಾಜಿ ಮೇತ್ರೆ, ಸಂತೋಷ ಪಾಟೀಲ, ಸಂಜೀವ ಶಿಂಧೆ, ಪ್ರವೀಣ ಸವರೆ, ಸಂಗಮೇಶ ಟೆಂಕಾಳೆ, ಶಿವು ಅಣದೂರೆ,
ಜಗದೀಶ ಬಿರಾದರ, ಭಿಬಿಶನ ಬಿರಾದಾರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.