ಶನಿವಾರ, ಅಕ್ಟೋಬರ್ 23, 2021
20 °C
ಅಖಿಲ ಭಾರತ ಕಿಸಾನ್‌ಸಭಾ ತಾಲ್ಲೂಕು ಸಮಿತಿ ಮನವಿ ಸಲ್ಲಿಕೆ

ಉತ್ತರಪ್ರದೇಶ ಘಟನೆ: ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಉತ್ತರಪ್ರದೇಶದಲ್ಲಿ ರೈತರ ಮೇಲೆ ವಾಹನ ಹಾಯ್ದು 8 ಮಂದಿ ಮೃತಪಟ್ಟ ಘಟನೆಯನ್ನು ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಅಖಿಲ ಭಾರತ ಕಿಸಾನ್‌ಸಭಾ ತಾಲ್ಲೂಕು ಸಮಿತಿ ಒತ್ತಾಯಿಸಿದೆ.

ಸಮಿತಿ ಪದಾಧಿಕಾರಿಗಳು ರಾಷ್ಟ್ರಪತಿ ಅವರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಸಂಯುಕ್ತ ಕಿಸಾನಾ ಮೋರ್ಚಾದ ನೇತೃತ್ವದಲ್ಲಿ ದೆಹಲಿ ಗಡಿಯಲ್ಲಿ ರೈತರು ಹನ್ನೊಂದು ತಿಂಗಳಿಂದ ಚಳವಳಿ ನಡೆಸುತ್ತಿದ್ದಾರೆ. ರೈತ ಚಳವಳಿ ಹತ್ತಿಕ್ಕಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ರೈತರು ಹರಿಯಾಣಾ ಹಾಗೂ ಉತ್ತರಪ್ರದೇಶದಲ್ಲಿ ಕಿಸಾನ್ ಮಹಾ ಪಂಚಾಯತ್‌ ನಡೆಸಿ ಕೇಂದ್ರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಚಳವಳಿ ಬಲಗೊಳ್ಳುತ್ತಿರುವುದನ್ನು ನೋಡಿ ಹತಾಶರಾಗಿ ಬಿಜೆಪಿಯವರು ರೈತರ ಮೇಲೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ ಮಿಶ್ರಾ ಅವರ ಬೆಂಗಾವಲು ಪಡೆ ರೈತರ ಮೇಲೆ ಉದ್ದೇಶ ಪೂರ್ವಕವಾಗಿ ವಾಹನ ಹಾಯಿಸಿರುವುದು ಅಮಾನವೀಯವಾಗಿದೆ ಎಂದು ಖಂಡಿಸಿದರು.

ಅಖಿಲ ಭಾರತ ಕಿಸಾನ್‌ ಸಭಾದ ರಾಜ್ಯ ಘಟಕದ ಉಪಾಧ್ಯಕ್ಷ ಬಾಬುರಾವ್ ಹೊನ್ನಾ, ಜಿಲ್ಲಾ ಘಟಕದ ಅಧ್ಯಕ್ಷ ನಜೀರ್ ಅಹ್ಮದ್, ತಾಲ್ಲೂಕು ಘಟಕದ ಅಧ್ಯಕ್ಷ ಮಹಮ್ಮದ್‌ ಖಮರಪಟೇಲ್, ಗುರುಪಾದಯ್ಯ ಎಂ.ಡಿ ಶಫಾಯತ್‌ಅಲಿ, ಅಬ್ದುಲ್ ಖಾದರ್ ಪ್ರಭು ತಗಣಿಕರ್, ಖದೀರ್‌ಮಿಯಾ, ಪುಪ್ಪುರಾಜ ಮೇತ್ರೆ, ಸುನೀಲ ವರ್ಮಾ,
ಮಹ್ಮದ್ ಅಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.