ಮಂಗಳವಾರ, ಜನವರಿ 25, 2022
28 °C

ಬೀದರ್ | ನಾಳೆ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ಜಿಲ್ಲೆಯಲ್ಲಿ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ.

ಶನಿವಾರ ಸರ್ಕಾರಿ ಕಚೇರಿಗಳಿಗೆ ರಜೆ ಇದೆ. ಸರ್ಕಾರಿ, ಖಾಸಗಿ ಶಾಲೆಗಳು, ಪದವಿಪೂರ್ವ ಕಾಲೇಜು, ಪದವಿ ಕಾಲೇಜುಗಳ ಆಡಳಿತ ಮಂಡಳಿಗಳು ಈಗಾಗಲೇ ರಜೆ ಘೋಷಣೆ ಮಾಡಿವೆ. ಸರ್ಕಾರಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ನಿಬರ್ಂಧ ಹೇರಲಾಗಿದೆ. ದೇಗುಲದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂಗಡಿ ತೆರೆಯುವುದನ್ನು ಕೂಡ ನಿಷೇಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲೇ ಉಳಿದು ಕೋವಿಡ್ ನಿಯಂತ್ರಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಾರಾಂತ್ಯ ಕರ್ಫ್ಯೂ: ಜನವರಿ 7 ರಂದು ರಾತ್ರಿ 8 ಗಂಟೆಯಿಂದ ಜ. 17 ಸೋಮವಾರ ಬೆಳಗಿನ 5 ಗಂಟೆಯ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿ ಇರಲಿದೆ. ಈ ದಿನಗಳನ್ನು ಹೊರತು ಪಡಿಸಿ ಉಳಿದ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.