ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2.04 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಪಲ್ಸ್ ಪೊಲಿಯೊ ಲಸಿಕಾ ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾಧಿಕಾರಿ ಸೂಚನೆ
Last Updated 9 ಜನವರಿ 2021, 12:55 IST
ಅಕ್ಷರ ಗಾತ್ರ

ಬೀದರ್: ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಪಲ್ಸ್ ಪೊಲಿಯೊ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಜನವರಿ 17 ರಿಂದ 20ರ ವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಯಾ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಆಡಳಿತ ವೈದ್ಯಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಅವರು, ಪ್ರತಿ ತಾಲ್ಲೂಕುಗಳಿಗೆ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ತಾಲ್ಲೂಕು ಆರೋಗ್ಯ ಅಧಿಕಾರಿಗಳು ತಮ್ಮ ಅಧೀನದ ಎಲ್ಲ ಕ್ಷೇತ್ರಗಳ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ. ರೆಡ್ಡಿ ಮಾತನಾಡಿ, ಜನವರಿ 17ರಂದು 1,003 ಬೂತ್‍ಗಳ ಮೂಲಕ ಮಕ್ಕಳಿಗೆ ಪೊಲಿಯೊ ಲಸಿಕೆ ಹಾಕಲಾಗುವುದು. ಜನವರಿ 18 ರಿಂದ 20ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.

2011 ರಲ್ಲಿ ಭಾರತದಲ್ಲಿ ಕೊನೆಯ ಪೊಲಿಯೊ ಪ್ರಕರಣ ಪತ್ತೆಯಾಗಿತ್ತು. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಪೊಲಿಯೊ ಮುಕ್ತ ಎಂದು ಘೋಷಿಸಿತ್ತು. ಆದರೂ ನೆರೆ ರಾಷ್ಟ್ರಗಳಾದ ಪಾಕಿಸ್ತಾನ್, ಅಪ್ಘಾನಿಸ್ತಾನ್‍ಗಳಲ್ಲಿ ಈಗಲೂ ಪೊಲಿಯೊ ಪ್ರಕರಣಗಳಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 5 ವರ್ಷದ ಒಳಗಿನ 2,04,203 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಲಸಿಕೆ ಹಾಕಲು 2,006 ಲಸಿಕೆದಾರರು ಹಾಗೂ ಬೂತ್ ಮೇಲ್ವಿಚಾರಣೆಗೆ 201 ಜನ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಕಲಬುರ್ಗಿಯ ಎಸ್‍ಎಂಒದ ಡಾ.ಅನಿಲಕುಮಾರ ತಾಳಿಕೋಟಿ, ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಅಧಿಕಾರಿ ಡಾ.ಮಹೇಶ ಬಿರಾದಾರ, ಡಾ. ಶಿವಶಂಕರ ಬಿ, ಡಾ. ಕೃಷ್ಣಾ ರೆಡ್ಡಿ, ಡಾ. ಅನಿಲ ಚಿಂತಾಮಣಿ, ಡಾ. ದೀಪಾ ಖಂಡ್ರೆ, ಶ್ರಾವಣ ಜಾಧವ, ಶಿವಶಂಕರ ಬೆಮಳಗಿ, ಲೋಕೇಶ ಸಲಗರ್, ಗುರುನಾಥ, ಅಶೋಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT