ಶುಕ್ರವಾರ, ಸೆಪ್ಟೆಂಬರ್ 17, 2021
23 °C

ಬೀದರ್: 110 ವಿದ್ಯಾರ್ಥಿನಿಯರಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಜನವಾಡ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 110 ವಿದ್ಯಾರ್ಥಿನಿಯರಿಗೆ ಶುಕ್ರವಾರ ಕೋವಿಡ್‌ ಲಸಿಕೆ ನೀಡಲಾಯಿತು.

ಬೀದರ್‌ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸಂಗಾರೆಡ್ಡಿ ನೇತೃತ್ವದಲ್ಲಿ ವೈದ್ಯಕೀಯ ಸಿಬ್ಬಂದಿ 100 ವಿದ್ಯಾರ್ಥಿನಿಯರಿಗೆ ಎರಡನೇ ಡೋಸ್‌ ಹಾಗೂ 10 ವಿದ್ಯಾರ್ಥಿನಿಯರಿಗೆ ಮೊದಲ ಡೋಸ್ ನೀಡಿದರು. ಸ್ವಯಂ ಪ್ರೇರಣೆಯಿಂದ ಕಾಲೇಜು ಆವರಣಕ್ಕೆ ಬಂದ 30 ಸ್ಥಳೀಯ ನಿವಾಸಿಗಳಿಗೂ ಲಸಿಕೆ ಕೊಡಲಾಯಿತು.

ಕಾಲೇಜಿನ ಪ್ರಾಚಾರ್ಯ ರಾಜಪ್ಪ ಬಬಚೇಡಿ, ಕಾಲೇಜಿನ ಕೋವಿಡ್‌ ಲಸಿಕೆ ನೋಡಲ್‌ ಅಧಿಕಾರಿ ವಿದ್ಯಾ ಪಾಟೀಲ ಹಾಗೂ ಉಪನ್ಯಸಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು