ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ: ಪ್ರಭು ಚವಾಣ್ ಹೇಳಿಕೆ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿಕೆ
Last Updated 12 ಜೂನ್ 2021, 14:56 IST
ಅಕ್ಷರ ಗಾತ್ರ

ಬೀದರ್‌: ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಆಶಾ, ಅಂಗನ ವಾಡಿ ಕಾರ್ಯಕರ್ತೆಯರು, ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪತ್ರಕರ್ತರು ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ಲಸಿಕಾಕರಣದಲ್ಲಿ ಶೇ 100ರಷ್ಟು ಪ್ರಗತಿ ಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆದು, ತಮ್ಮನ್ನು ರಕ್ಷಿಸಿಕೊಳ್ಳಬೇಕು. ಕೋವಿಡ್‌ ಹೊಡೆದೋಡಿಸಲು ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಜೂನ್ 12ರಂದು 29 ಜನರಿಗೆ ಕೋವಿಡ್ ದೃಢಪಟ್ಟಿದೆ. ಆಸ್ಪತ್ರೆಯಿಂದ 21 ಜನರು ಬಿಡುಗಡೆಯಾಗಿದ್ದಾರೆ. ಐವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ಟು 2500 ಜನರ ಕೋವಿಡ್ ಪರೀಕ್ಷೆ ನಡೆಸಲಾಗಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 24,049, ಸಕ್ರಿಯ ಪ್ರಕರಣಗಳು 107 ಇವೆ. 74 ಜನರು
ಹೋಮ್ ಐಸೋಲೇಷನ್‌ನಲ್ಲಿದ್ದಾರೆ. 33 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ 26 ಕಪ್ಪು ಶಿಲೀಂದ್ರ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಪೈಕಿ 15 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಸಚಿವರು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿ಼ಷ್ಠಾಧಿಕಾರಿ ನಾಗೇಶ ಡಿ.ಎಲ್., ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT