ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಯಂತ್ರಣಕ್ಕೆ ಲಸಿಕೆಯೇ ಪರಿಹಾರ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿಕೆ
Last Updated 22 ಮೇ 2021, 14:47 IST
ಅಕ್ಷರ ಗಾತ್ರ

ಬೀದರ್: ಕೋವಿಡ್ ನಿಯಂತ್ರಣಕ್ಕೆ ಲಸಿಕೆಯೊಂದೇ ಪರಿಹಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ 18ರಿಂದ 44 ವರ್ಷದ ಒಳಗಿನ ಮುಂಚೂಣಿ ಕೋವಿಡ್ ವಾರಿಯರ್ಸ್ ಲಸಿಕಾಕರಣಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ನಿರಂತರ ಶ್ರಮಿಸುತ್ತಿದೆ. ಇದೀಗ 18ರಿಂದ 44 ವರ್ಷದ ಒಳಗಿನ ಆಯ್ದ ಕೋವಿಡ್ ವಾರಿಯರ್ಸ್‍ಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂದರು.

ಅಂಗವಿಕಲರು, ಚಿತಾಗಾರ, ಸ್ಮಶಾನ, ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೊ, ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಸಿಬ್ಬಂದಿ, ಅಂಚೆ ಇಲಾಖೆ ಸಿಬ್ಬಂದಿ, ಬೀದಿಬದಿ ವ್ಯಾಪಾರಿಗಳು, ಭದ್ರತೆ ಮತ್ತು ಹೌಸ್ ಕೀಪಿಂಗ್ ಸಿಬ್ಬಂದಿ, ನ್ಯಾಯಾಂಗ ಇಲಾಖೆ ಅಧಿಕಾರಿಗಳು, ಮಕ್ಕಳ ಸಂರಕ್ಷಣಾಧಿಕಾರಿಗಳು, ಆಸ್ಪತ್ರೆಗಳಿಗೆ ಸರಕು, ಆಮ್ಲಜನಕ, ಔಷಧಿ, ವೈದ್ಯಕೀಯ ಉಪಕರಣ ಸರಬರಾಜು ಮಾಡುವ ಸಿಬ್ಬಂದಿ, ಔಷಧ ಕಂಪನಿಯ ಸಿಬ್ಬಂದಿ, ಭಾರತೀಯ ಆಹಾರ ನಿಗಮದ ಸಿಬ್ಬಂದಿ ಸೇರಿದಂತೆ 38 ಜನರಿಗೆ ಲಸಿಕೆ ನೀಡಲಾಯಿತು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT