ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ; ನಾಳೆಯಿಂದ ಪಟ್ಟದ್ದೇವರ ಸ್ಮರಣೋತ್ಸವ

Last Updated 20 ಏಪ್ರಿಲ್ 2022, 4:58 IST
ಅಕ್ಷರ ಗಾತ್ರ

ಭಾಲ್ಕಿ: ಪಟ್ಟಣದ ಚನ್ನಬಸವಾಶ್ರಮದಲ್ಲಿ ಗುರುವಾರ (ಏ.21) ಮತ್ತು ಶುಕ್ರವಾರ(ಏ.22)ನಡೆಯುವ ವಚನ ಜಾತ್ರೆ ಮತ್ತು ಡಾ.ಚನ್ನಬಸವ ಪಟ್ಟದ್ದೇವರ 23ನೇ ಸ್ಮರಣೋತ್ಸವಕ್ಕೆ ಅಗತ್ಯ ಸಿದ್ಧತೆ ಪೂರ್ಣಗೊಂಡಿದ್ದು, ಗೊ.ರು.ಚನ್ನಬಸ್ಸಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಸ್ಮರಣೋತ್ಸವ ಸಮಿತಿ ಅಧ್ಯಕ್ಷರೂ ಆದ ಶಾಸಕ ಈಶ್ವರ ಖಂಡ್ರೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಬೃಹತ್‌ ಸಭಾ ಮಂಟಪ, ಪ್ರಸಾದ ವ್ಯವಸ್ಥೆ, ವಾಹನ ಪಾರ್ಕಿಂಗ್‌ನಂತಹ ವ್ಯವಸ್ಥೆ ಮಾಡಲಾಗಿದೆ. ಮುಂದಿನ ಪೀಳಿ ಗೆಗೆಪಟ್ಟದ್ದೇವರ ಜೀವನಾದರ್ಶ, ಐತಿಹಾಸಿಕ ಕಾರ್ಯ ತಿಳಿಸಲಾಗುವುದು. ಕಾರ್ಯ ಕ್ರಮಕ್ಕೆ ಆಗಮಿಸುವವರಿಗೆ ಉಳಿದು ಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಶುಕ್ರವಾರ ಸಂಜೆ 6ಕ್ಕೆ ನಡೆಯುವ ವಚನ ದರ್ಶನ ಮಂಗಲ ಕಾರ್ಯಕ್ರಮಕ್ಕೆ ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಮಹಾಲಿಂಗ ಸ್ವಾಮೀಜಿ, ವಿಶ್ವನಾಥಪ್ಪ ಬಿರಾದರ, ಸಿದ್ದಯ್ಯ ಕಾವಡಿಮಠ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳುವರು. ಶನಿವಾರ ಬೆಳಿಗ್ಗೆ 6ಕ್ಕೆ ಹಿರೇಮಠ ಸಂಸ್ಥಾನದಿಂದ ಚನ್ನಬಸವಾಶ್ರಮದವರೆಗೆ ಪ್ರಭಾತ ಪಥ ಸಂಚಲನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಅದೇ ದಿನ ಬೆಳಿಗ್ಗೆ 7ಕ್ಕೆ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ಮಂಡಳಿಯ ರಮೇಶ ಕೋಳಾರ ಅವರು ಷಟಸ್ಥಲ ಧ್ವಜಾರೋಹಣ ನೆರವೇರಿಸುವರು. ವಕೀಲ ರಾಜಶೇಖರ ಅಷ್ಟೂರೆ ಬಸವ ಗುರುವಿನ ಪೂಜೆ ನೆರವೇರಿಸುವರು. ಪ್ರಮುಖರಾದ ಪ್ರಸನ್ನ ಖಂಡ್ರೆ, ಸಾಗರ ಖಂಡ್ರೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು ಎಂದರು.

ಸಂಜೆ 4ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು, ಹುಲಸೂರಿನ ಶಿವಾನಂದ ಸ್ವಾಮೀಜಿ, ಕೌಲಗಾದ ಅಭಿನವ ಷಣ್ಮುಖ ಸ್ವಾಮೀಜಿ, ಗೋರಚಿಂಚೋಳಿಯ ಸಿದ್ಧರಾಮೇಶ್ವರ ಪಟ್ಟದ್ದೇವರು, ಕೌಠಾದ ಸಿದ್ಧರಾಮೇಶ್ವರ ಶರಣರು, ಬೇಲೂರಿನ ಪಂಚಾಕ್ಷರಿ ಸ್ವಾಮೀಜಿ, ಬೀದರ್‌ನ ಅಕ್ಕ ಅನ್ನಪೂರ್ಣ, ಅಕ್ಕ ಗಂಗಾಬಿಕಾ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬೆಂಗಳೂರಿನ ಸಾಹಿತಿ ಡಾ.ಬಸವರಾಜ ಸಾದರ, ಪಶು ಸಂಗೋಪನಾ ಸಚಿವ ಪ್ರಭು ಚವಾಣ್, ಶಾಸಕರಾದ ಪಿ. ರಾಜೀವ, ರಘುನಾಥ ಮಲ್ಕಾಪೂರೆ, ಶರಣು ಸಲಗರ, ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷೆ ರಾಜೇಶ್ವರಿ ಮೋರೆ ಒಳಗೊಂಡಂತೆ ಅನೇಕ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜ.ಮು.ರಾ.ಸುತ್ತಾಟ ಕಲಾವಿ ದರಿಂದ ‘ಸೋರುತಿಹುದು ಸಂಬಂಧ‘ ನಾಟಕ ಪ್ರದರ್ಶಗೊಳ್ಳಲಿದೆ.

ಏ.22ರಂದು ಅನುಭಾವ ಗೋಷ್ಠಿ

ಏ.22ರ ಬೆಳಿಗ್ಗೆ ನಡೆಯುವ ಅನುಭಾವ ಗೋಷ್ಠಿಯಲ್ಲಿ ಬೆಳಗಾವಿಯ ಅಲ್ಲಮಪ್ರಭು ಸ್ವಾಮೀಜಿ, ಆಲಮಟ್ಟಿಯ ರುದ್ರಮುನಿ ಸ್ವಾಮೀಜಿ ಕೇಂದ್ರ ಸಚಿವ ಭಗವಂತ ಖೂಬಾ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ, ಶಾಸಕ ಬಂಡೆಪ್ಪಾ ಖಾಶೆಂಪೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ.ಎಸ್‌.ನಾಗಾಭರಣ, ಪ್ರಮುಖರಾದ ಬಿ.ಎಸ್‌.ಪರಮಶಿವಯ್ಯ, ಸತೀಶಕುಮಾರ ಹೊಸಮನಿ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ, ರಾಜಶೇಖರ ಮಠಪತಿ ಪಾಲ್ಗೊಳ್ಳುವರು. ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪ್ರಶಸ್ತಿಗೆ ಆಯ್ಕೆಯಾದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಡಾ. ಬಸವಲಿಂಗ ಪಟ್ಟದ್ದೇವರು ಮಾಹಿತಿ ನೀಡಿದರು.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೂಡಲ ಸಂಗಮದ ಜಗದ್ಗುರು ಡಾ.ಗಂಗಾದೇವಿ ಮಾತಾಜಿ, ಚಿಂಚಣ್‌ನ ಅಲ್ಲಮಪ್ರಭು ಸ್ವಾಮೀಜಿ, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಈಶ್ವರ ಖಂಡ್ರೆ, ಶಾಸಕ ರಾಜಶೇಖರ ಪಾಟೀಲ ಶಾಸಕರಾದ ಅರವಿಂದ ಅರಳಿ, ರಹೀಂಖಾನ, ಶಶೀಲ ನಮೋಶಿ ಪಾಲ್ಗೊಳ್ಳುವರು. ಸಂಜೆ ‘ಅವಿರಳ ಜ್ಞಾನಿ ಚನ್ನಬಸವಣ್ಣ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.

ಸ್ಮರಣೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರಕಾಶ ಖಂಡ್ರೆ, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT