ಬೀದರ್: ಬಸವಾದಿ ಶರಣರು ನೆಲದಾಡಿದ ನೆಲ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ಬೇಡಿಕೆಗೆ ರಾಜ್ಯ ಬಜೆಟ್ ನಲ್ಲಿ ಸ್ಪಂದನೆ ದೊರೆತಿದೆ.

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ನೇತೃತ್ವದ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಚನ ವಿವಿ ಸ್ಥಾಪನೆಯ ಬೇಡಿಕೆ ಮಂಡಿಸಿತ್ತು. ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣವಾಗುತ್ತಿದ್ದು, ಅದಕ್ಕೆ ಪೂರಕವಾಗಿ ವಚನ ವಿವಿ ಸ್ಥಾಪಿಸಿದರೆ ವಚನ ಸಾಹಿತ್ಯದ ಹೆಚ್ಚಿನ ಸಂಶೋಧನೆ ಮತ್ತು ಅಧ್ಯಯನಕ್ಕೆ ಅನುಕೂಲವಾಗಲಿದೆ ಎಂದು ಪ್ರತಿಪಾದಿಸಿದ್ದರು.

ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂತಾನಹರಣ ನಿಯಂತ್ರಣವನ್ನು ವೈಜ್ಞಾನಿಕ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ ತರಲು ಪಶು ವೈದ್ಯರು ಮತ್ತು ಪಶು ವೈದ್ಯಕೀಯ ವಿದ್ಯಾರ್ಥಿಗಳಿಗೆ ಉನ್ನತಮಟ್ಟದ ತಾಂತ್ರಿಕ ತರಬೇತಿ ನೀಡಲು ಬೀದರ್ ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.