ಬುಧವಾರ, ಡಿಸೆಂಬರ್ 2, 2020
23 °C
ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಕಾಂತ ಪಾಟೀಲ ಹೇಳಿಕೆ

ವಡ್ಡಾರಾಧನೆ ಹಳ್ಳಿಖೇಡ ನೆಲ ಮೂಲದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಕನ್ನಡ ಸಾಹಿತ್ಯದ ಮೊದಲ ಗದ್ಯಗ್ರಂಥ, ಬೆಳ್ಳಿ ಚುಕ್ಕಿ ವಡ್ಡಾರಾಧನೆ ಬೀದರ್‌ ಜಿಲ್ಲೆಯ ಹಳ್ಳಿಖೇಡ ನೆಲದ್ದು’ ಎಂದು ಸರ್ಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಕಾಂತ ಪಾಟೀಲ ನುಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಸುವರ್ಣಮಹೋತ್ಸವದ ನಿಮಿತ್ತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ‘ಕನ್ನಡ ಸಾಹಿತ್ಯ ಪರಂಪರೆ: ಅವಲೋಕನ, ಸರಣಿ ಉಪನ್ಯಾಸ ಮಾಲಿಕೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ವಡ್ಡಾರಾಧನೆ ಕುರಿತು ವಿಶೇಷ ಉನ್ಯಾಸ ನೀಡಿದರು.

‘ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಕೋವಿಡ್‌ ಸಂದರ್ಭದಲ್ಲೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ‘ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಮುಸ್ಸಂಜೆ 5.30 ರಿಂದ 6.30ರವರೆಗೆ ಯುಟ್ಯೂಬ್ ಮತ್ತು ಫೇಸ್‍ಬುಕ್‌ನಲ್ಲಿ ನೇರ ಪ್ರಸಾರವಾಗಲಿದೆ’ ಎಂದರು,

ವೀರಶೆಟ್ಟಿ ಚನಶೆಟ್ಟಿ ಇದ್ದರು. ಬಸವರಾಜ ಬಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು ಪ್ರೊ. ಜಗನ್ನಾಥ ಕಮಲಾಪುರೆ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.