ಶುಕ್ರವಾರ, ಏಪ್ರಿಲ್ 23, 2021
28 °C
ಹುಮನಾಬಾದ್: ಸಾಂಕೇತಿಕ ಪಲ್ಲಕ್ಕಿ ಉತ್ಸವ

ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ಹುಮನಾಬಾದ್‌ನಲ್ಲಿ ವೀರಭದ್ರೇಶ್ವರ ದೇವರ ಸರಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ರಾಜಶೇಖರ ಪಾಟೀಲ ಅವರು ಗುರುವಾರ ರಾತ್ರಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ‘ಕೋವಿಡ್‌-19 ಆತಂಕದಿಂದಾಗಿ ಕೇವಲ ಧಾರ್ಮಿಕ ವಿಧಿಗಳನ್ನು ಸೇವಾಧರಿಗಳಿಂದ ಮಾತ್ರ ನಡೆಸಿ ಜಾತ್ರೆ ಮುಗಿಸಬೇಕಾಗಿದೆ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮನೆಯಲ್ಲಿಯೇ ಭಕ್ತಿ ಸೇವೆ ಸಲ್ಲಿಸಬೇಕು’ ಎಂದು ನುಡಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ರೇಣುಕಗಂಗಾಧರ ಶಿವಾಚಾರ್ಯ ಸ್ವಾಮೀಜಿ ಅವರನ್ನು ವಾದ್ಯ ಮೇಳಗಳೊಂದಿಗೆ ದೇಗುಲಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು. ಪಲ್ಲಕ್ಕಿ ಉತ್ಸವದ ಮೂಲಕ ಜಾತ್ರೆ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.