ಬಸವಕಲ್ಯಾಣ (ಬೀದರ್ ಜಿಲ್ಲೆ): ‘ಸಮೀಕ್ಷೆ ಹೆಸರಲ್ಲಿ ನಮ್ಮ ನಮ್ಮಲ್ಲೇ ಭಿನ್ನಾಭಿಪ್ರಾಯ ತಂದು ವೀರಶೈವ ಲಿಂಗಾಯತ ಸಮಾಜ ಒಡೆಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂಬುದನ್ನು ಸಮಾಜ ಬಾಂಧವರು ಗಂಭೀರವಾಗಿ ಪರಿಗಣಿಸಬೇಕು’ ಎಂದು ರಂಭಾಪುರಿ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ವೀರಶೈವ ಲಿಂಗಾಯತ ಒಂದೇ ಆಗಿದೆ. ಈ ಧರ್ಮ ಸ್ವತಂತ್ರ ಧರ್ಮ ಆಗಬೇಕು ಎಂಬುದು ನಮ್ಮ ಆಶಯ. ಇದಕ್ಕಾಗಿ ಹಲವಾರು ಸಲ ನಾವು ಪ್ರಯತ್ನಿಸಿದ್ದೇವೆ. ದೊಡ್ಡ ಸಮಾವೇಶಗಳನ್ನು ಆಯೋಜಿಸಿದ್ದೇವೆ. ಅದರಲ್ಲಿ ಗುರು–ವಿರಕ್ತರು ಪಾಲ್ಗೊಂಡಿದ್ದರೂ ನಮ್ಮ ಉದ್ದೇಶ ಈಡೇರಲಿಲ್ಲ’ ಎಂದು ಹೇಳಿದರು.

’ಬೆರಳೆಣಿಕೆಯ ಜನ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಮಕಾಲೀನ ಸಮಾಜದ ಸಮಸ್ಯೆ ಅರಿತು ಸಾಗುವುದಕ್ಕೆ ನಾವು ಒಂದು ಹೆಜ್ಜೆ ಮುಂದಿದ್ದೇವೆ. ಆದರೆ, ಇದಕ್ಕೆ ಕೆಲವರು
ವಿರೋಧಿಸುತ್ತಿದ್ದಾರೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.