ಬೀದರ್: ಜಿಲ್ಲೆಯ ವಿವಿಧೆಡೆ ಬುಧವಾರ ವೇಮನ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕೋವಿಡ್ ಕಾರಣ ಜಿಲ್ಲಾ ರೆಡ್ಡಿ ಸಮಾಜದ ವತಿಯಿಂದ ಇಲ್ಲಿಯ ಅಮಲಾಪುರ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಅವರು ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿ ಗೌರವಿಸಿದರು.
ವೇಮನ ಅವರು ಮನುಕುಲದ ಉದ್ಧಾರಕ್ಕೆ ಶ್ರಮಿಸಿದ್ದರು ಎಂದು ಹೇಳಿದರು.

ವೇಮನರ ವಿಚಾರಗಳನ್ನು ಎಲ್ಲರೂ ಅರಿಯಬೇಕು. ಆದರ್ಶ ಬದುಕು ಸಾಗಿಸಬೇಕು ಎಂದು ನುಡಿದರು.

ಜಿಲ್ಲಾ ರೆಡ್ಡಿ ಸಮಾಜದ ಉಪಾಧ್ಯಕ್ಷ ಚಂದ್ರಶೇಖರ ರೆಡ್ಡಿ, ಕಾರ್ಯದರ್ಶಿ ಗೋಪಾಲ ರೆಡ್ಡಿ, ಜಂಟಿ ಕಾರ್ಯದರ್ಶಿ ವೆಂಕಟ ರೆಡ್ಡಿ, ಕೃಷ್ಣಾ ರೆಡ್ಡಿ, ನರೇಂದ್ರ ರೆಡ್ಡಿ, ಸಚಿನ್ ರೆಡ್ಡಿ ಯಾಚೆ, ಗೋಪಾಲ್ ರೆಡ್ಡಿ ಅಮಲಾಪುರ ಇದ್ದರು.

ಹೇಮರೆಡ್ಡಿ ಮಲ್ಲಮ್ಮ ಬ್ಯಾಂಕ್: ನಗರದ ಶಿವನಗರದಲ್ಲಿನ ಹೇಮರೆಡ್ಡಿ ಮಲ್ಲಮ್ಮ ವಿವಿಧೊದ್ದೇಶ ಸೌಹಾರ್ದ ಬ್ಯಾಂಕ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷ ಸಂಗ್ರಾಮ ರೆಡ್ಡಿ ಹುಣಸಗೇರಾ ಅವರು ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಆಕಾಶ ರೆಡ್ಡಿ, ಶ್ರೀನಿವಾಸ ರೆಡ್ಡಿ ಮೊದಲಾದವರು ಇದ್ದರು.

ವೈರಾಗ್ಯ ಜ್ಞಾನಿ ವೇಮನರು

ವೈರಾಗ್ಯ ಜ್ಞಾನಿ ವೇಮನರು ಜನರಿಗೆ ವೇದಾಂತ ರಹಸ್ಯ ತಿಳಿಸುವ ಮೂಲಕ ಜನರ ಮನದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಜಿಲ್ಲಾ ಪಂಚಾಯಿತಿಯ ಆಡಳಿತ ಅಧೀಕ್ಷಕ ಉಮೇಶ ಜಾಬಾ ಹೇಳಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ವೇಮನರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಆಡಳಿತ ಶಾಖೆಯ ವಿಷಯ ನಿರ್ವಾಹಕ ವಿಜಯಕುಮಾರ ಮಾತನಾಡಿ, ಸರ್ವಜ್ಞರು 16ನೇ ಶತ ಮಾನದವರಾದರೇ, ವೇಮನರು 17ನೇ ಶತ ಮಾನದವರು. ಇಬ್ಬರು ವೈರಾಗ್ಯಿಗಳಾಗಿದ್ದರೂ ಜೀವನದ ನಿಜಅರ್ಥವನ್ನು ಜನ ಸಾಮಾನ್ಯರಿಗೆ ತಿಳಿಸಿದ್ದಾರೆ ಎಂದರು.

ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಅವರು ವೇಮನರ ಭಾವ ಚಿತ್ರಕ್ಕೆ ಪುಷ್ಪ ಸಮರ್ಪಿಸಿದರು.

ಸಿಎಒ ಜಹೀರಾ ನಸೀಮ್, ಸಿಪಿಒ ಎಸ್‍ಎಸ್ ಮಠಪತಿ, ಗ್ರಾಮೀಣವೃದ್ಧಿ ಪಂಚಾಯತ್ ರಾಜ್ ಇಲಾಖೆಯ ರಾಜಕುಮಾರ, ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ) ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಮಹೇಶ ಪಾಟೀಲ, ಮನೋಹರ್ ಪಾಟೀಲ, ದೀಪಕ ಕಡಿಮನಿ, ಕೋಮಲಕೀರಣ, ಜ್ಯೋತಿ, ಶೇಷಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.