ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಸೂರ: ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲು ಲಾಳೆ ಆಗ್ರಹ

Published 31 ಡಿಸೆಂಬರ್ 2023, 14:42 IST
Last Updated 31 ಡಿಸೆಂಬರ್ 2023, 14:42 IST
ಅಕ್ಷರ ಗಾತ್ರ

ಹುಲಸೂರ: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನನ್ನಾಗಿ ನೇಮಿಸಬೇಕು ಎಂದು ಬಿಜೆಪಿ ಕಾರ್ಯಕರ್ತ ವೆಂಕಟ ಲಾಳೆ ಅವರು, ಪಕ್ಷದ ವೀಕ್ಷಕರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷರ ನೇಮಕಕ್ಕಾಗಿ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಸದಸ್ಯತ್ವ ಪಡೆದು ಕಾರ್ಯಕರ್ತರಾಗಿ ಸುಮಾರು 28 ವರ್ಷಗಳು ಗತಿಸಿವೆ. ಪಕ್ಷದ ಗ್ರಾಮ ಸಮಿತಿ ಕಾರ್ಯದರ್ಶಿ, ಎರಡು ಬಾರಿ ಸಾಯಗಾಂವ ಜಿಲ್ಲಾ ಪಂಚಾಯಿತಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ, ಹುಲಸೂರ ವಿಧಾನಸಭೆ ಕ್ಷೇತ್ರದ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿದೆ. 2018ಕ್ಕೆ ಆಳಂದ ವಿಧಾನಸಭಾ, 2019ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ, 2023ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರದ ಅರಭಾವಿ ಹಾಗೂ ರಾಯಬಾಗ ಕ್ಷೇತ್ರಕ್ಕೆ ವಿಸ್ತಾರಕನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದರು.

ಸದ್ಯ ಬೀದರ್‌ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷನಾಗಿ ನೇಮಕ ಮಾಡಲಾಗಿದೆ. ಪಕ್ಷದ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿ ಕ್ಷೇತ್ರದ ಎಲ್ಲ ಕಾರ್ಯಕರ್ತರೊಂದಿಗೆ ಶಕ್ತಿ ಮೀರಿ ಪಕ್ಷದ ಯಾವುದೇ ಜವಾಬ್ದಾರಿ ನಿರ್ವಹಿಸಲು ಸಿದ್ಧನಾಗಿದ್ದೇನೆ. ಪ್ರಸ್ತುತ ಬೀದರ್‌ ಜಿಲ್ಲೆಗೆ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT